PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಮಾ.  : ಕೊಪ್ಪಳ ಜಿಲ್ಲಾ ಪಂಚಾಯತ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿ,. ಬೆಂಗಳುರು ಹಾಗೂ ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಕೊಪ್ಪಳ ಜಿಲ್ಲೆಯ ಕುರಿಗಾರರ ಜಾಗೃತ ಸಮಾವೇಶ ಮತ್ತು ತಾಂತ್ರಿಕ ಕಾರ್ಯಾಗಾರ ಏ.೦೨ ರಂದು ಬೆಳಿಗ್ಗೆ ೧೧ ಗಂಟೆಗೆ ಕೊಪ್ಪಳದ ಸಾಹಿತ್ಯ ಭವನದಲ್ಲಿ ಏರ್ಪಡಿಸಲಾಗಿದೆ. 
  ಕುರಿಗಾರರ ಜಾಗೃತ ಸಮಾವೇಶ ಮತ್ತು ಕಾರ್ಯಗಾರ ಸಂದರ್ಭದಲ್ಲಿ ವಿಷಯ ತಜ್ಞರಿಂದ ಕುರಿ ಮತ್ತು ಮೇಕೆಗಳ ವೈಜ್ಞಾನಿಕ ಸಾಕಾಣಿಕೆ, ಮೇವು ಬೆಳೆಗಳ ಮಹತ್ವ ಮತ್ತು ಮೇವು ಅಭಿವೃದ್ಧಿ, ಕುರಿ-ಮೇಕೆಗಳಿಗೆ ಬರುವ ಕಾಯಿಲೆ ಮತ್ತು ಹತೋಟಿ ಹಾಗೂ ಕುರಿಗಾರರ ವಿಮೆ ಅಲ್ಲದೆ ನಿಗಮದ ವಿವಿಧ ಯೋಜನೆಗಳ ಅನುಷ್ಠಾನ ಕುರಿತಂತೆ ಮಾಹಿತಿ ನೀಡಲಾಗುವುದು.
  ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ದ ಅಧ್ಯಕ್ಷ ಪಂಡಿತರಾವ್ ಚಿದ್ರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸಲಿದ್ದು, ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.ತಂಗಡಗಿ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದು, ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ್, ಅಮರನಾಥ್ ಪಾಟೀಲ್, ಶರಣಪ್ಪ ಮಟ್ಟೂರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯದ್ ಜುಲ್ಲು ಖಾದರ್ ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ, ಜಿಲ್ಲಾ ಪಂಚಾಯತಿ ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ನಗರಸಭೆ ಅಧ್ಯಕ್ಷೆ ಬಸಮ್ಮ ರಾಮಣ್ಣ ಹಳ್ಳಿಗುಡಿ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ||ಕೆ.ಎಂ.ಮಹ್ಮದ್ ಜಫ್ರುಲ್ಲಾ ಖಾನ್, ತಾಲೂಕಾ ಪಂಚಾಯತ್ ಅಧ್ಯಕ್ಷೆ ವಿಶಾಲಾಕ್ಷಿ ಮಾಲಿಪಾಟೀಲ್, ಜಿಲ್ಲಾಧಿಕಾರಿ ಆರ್.ಆರ್.ಜನ್ನು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಪಿ.ರಾಜಾ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಬೆಳಗಾವಿ ಮತ್ತು ಕಲಬುರ್ಗಿ ವಿಭಾಗದ ಜಂಟಿ ನಿರ್ದೇಶಕ ಡಾ. ಬಿ.ಎಸ್.ಜಂಬಗಿ ಹಾಗೂ ಇತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ .


Advertisement

0 comments:

Post a Comment

 
Top