ಕೊಪ್ಪಳ ಮಾ. ೦೬ : ಕೊಪ್ಪಳ ಜಿಲ್ಲಾ ಪಂಚಾಯತಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಮಾ. ೦೭ ರಂದು ಬೆ. ೧೧ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ವಹಿಸುವರು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಅವರು ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ
ಕೊಪ್ಪಳ ಮಾ. : ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಮಾ. ೦೭ ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ ಕಾರಟಗಿಯಿಂದ ಹೊರಟು ಬೆ. ೧೧ ಗಂಟೆಗೆ ಕೊಪ್ಪಳ ನಗರಕ್ಕೆ ಆಗಮಿಸುವರು. ನಂತರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಏರ್ಪಡಿಸಲಾಗಿರುವ ಜಿ.ಪಂ. ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವರು. ರಾತ್ರಿ ೭ ಗಂಟೆಗೆ ಕಾರಟಗಿಗೆ ತೆರಳಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ ವಾಸ್ತವ್ಯ ಮಾಡುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.
0 comments:
Post a Comment