PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಮಾ. ೨೦  : ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಮಾ. ೩೦ ರಿಂದ ಏ. ೧೩ ರವರೆಗೆ ಜರುಗಲಿದ್ದು, ಈ ಕುರಿತು ಸಿದ್ಧತೆಗಳನ್ನು ಕೈಗೊಳ್ಳಲು ಪೂರ್ವಭಾವಿ ಸಭೆ ಮಾ. ೨೪ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯಲಿದೆ.
  ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಅವರು ವಹಿಸುವರು.  ಸಭೆಗೆ ಜಿಲ್ಲಾ ಜಾಗೃತ ದಳ ತಂಡದವರು, ವೈದ್ಯಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಪರೀಕ್ಷೆಯ ತಾಲೂಕು ನೋಡಲ್ ಅಧಿಕಾರಿಗಳು ಹಾಜರಾಗಬೇಕು ಎಂದು ಡಿಡಿಪಿಐ ಶ್ಯಾಮಸುಂದರ್  ತಿಳಿಸಿದ್ದಾರೆ.

Advertisement

0 comments:

Post a Comment

 
Top