ಕೊಪ್ಪಳ ಮಾ. ೨೫ : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಬುಧವಾರದಂದು ಒಟ್ಟು ೧೪ ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಸಮಾಜಶಾಸ್ತ್ರ ಮತ್ತು ಸಂಖ್ಯಾಶಾಸ್ತ್ರ ವಿಷಯ ಪರೀಕ್ಷೆಗೆ ಕೊಪ್ಪಳ ಜಿಲ್ಲೆಯ ೪೫೭೮ ವಿದ್ಯಾರ್ಥಿಗಳು ಹಾಜರಾಗಿದ್ದು, ೩೦೮ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಅಲ್ಲದೆ ಓರ್ವ ವಿದ್ಯಾರ್ಥಿ ಡಿಬಾರ್ ಆಗಿದ್ದಾನೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಪಿಯುಸಿ ಪರೀಕ್ಷೆಯ ಸಮಾಜಶಾಸ್ತ್ರ ವಿಷಯ ಪರೀಕ್ಷೆ ತೆಗೆದುಕೊಂಡಿರುವ ೪೫೯೨ ವಿದ್ಯಾರ್ಥಿಗಳ ಪೈಕಿ ೪೨೯೬ ವಿದ್ಯಾರ್ಥಿಗಳು ಹಾಜರಾಗಿದ್ದು, ೨೯೬ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕೊಪ್ಪಳ ತಾಲೂಕಿನಲ್ಲಿ ೧೩೦೫ ವಿದ್ಯಾರ್ಥಿಗಳ ಪೈಕಿ ೧೨೩೪ ವಿದ್ಯಾರ್ಥಿಗಳು ಹಾಜರಾಗಿದ್ದು, ೭೧ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಗಂಗಾವತಿ ತಾಲೂಕಿನಲ್ಲಿ ೧೪೩೪ ವಿದ್ಯಾರ್ಥಿಗಳ ಪೈಕಿ ೧೩೬೧ ವಿದ್ಯಾರ್ಥಿಗಳು ಹಾಜರಿದ್ದು, ೭೩ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಕುಷ್ಟಗಿ ತಾಲೂಕಿನಲ್ಲಿ ೧೦೩೩ ವಿದ್ಯಾರ್ಥಿಗಳ ಪೈಕಿ ೯೬೪ ಹಾಜರಿದ್ದು, ೬೯ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಯಲಬುರ್ಗಾ ತಾಲೂಕಿನಲ್ಲಿ ೮೨೦ ವಿದ್ಯಾರ್ಥಿಗಳ ಪೈಕಿ ೭೩೭ ವಿದ್ಯಾರ್ಥಿಗಳು ಹಾಜರಾಗಿದ್ದು, ೮೩ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಕೊಪ್ಪಳದ ಬಾಲಕರ ಸರ್ಕಾರಿ ಪ.ಪೂ. ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ನಡೆದ ಸಮಾಜಶಾಸ್ತ್ರ ವಿಷಯ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ.
ಸಂಖ್ಯಾಶಾಸ್ತ್ರ ವಿಷಯ ಪರೀಕ್ಷೆ ತೆಗೆದುಕೊಂಡಿರುವ ೨೯೪ ವಿದ್ಯಾರ್ಥಿಗಳ ಪೈಕಿ ೨೮೨ ವಿದ್ಯಾರ್ಥಿಗಳು ಹಾಜರಾಗಿದ್ದು, ೧೨ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕೊಪ್ಪಳ ತಾಲೂಕಿನಲ್ಲಿ ೧೫೬ ವಿದ್ಯಾರ್ಥಿಗಳ ಪೈಕಿ ೧೪೯ ವಿದ್ಯಾರ್ಥಿಗಳು ಹಾಜರಾಗಿದ್ದು, ೦೭ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಗಂಗಾವತಿ ತಾಲೂಕಿನಲ್ಲಿ ೧೩೮ ವಿದ್ಯಾರ್ಥಿಗಳ ಪೈಕಿ ೧೩೩ ವಿದ್ಯಾರ್ಥಿಗಳು ಹಾಜರಿದ್ದು, ೦೫ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್. ಶಿಂಧಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment