ಕೊಪ್ಪಳ,ಮಾ,೨೦: ತಾಲೂಕಿನ ಹಿರೇಬಗನಾಳ ಗ್ರಾಮದ ಸರಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸರಸ್ವತಿ ಪೂಜಾ ಕಾರ್ಯಕ್ರಮವನ್ನು ಏರ್ಪಡಿಸಲಾಯಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯ ವೀರಭದ್ರಪ್ಪ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂಸಿ ಅಧ್ಯಕ್ಷ ಗವಿಸಿದ್ದಪ್ಪ ಹೂಗಾರ, ಎಸ್.ಡಿ.ಎಂ.ಸಿ. ಸರ್ವ ಸದಸ್ಯರುಗಳು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗುರುಸಿದ್ದಪ್ಪ ಹೆಚ್.ಜಾಲವಾಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಶಿಕ್ಷಕ ಎನ್.ವಾಯ್.ಅಗಸಿಮುಂದಿನ ಪ್ರಾಸ್ತಾವಿಕವಾಗಿ ಮಾತನಾಡಿದರು.ಶಿಕ್ಷಕರುಗಳಾದ ಶಿವಾನಂದಯ್ಯ ಎಂ.ಕೆ ನಿರೂಪಿಸಿದರು, ರವೀಂದ್ರ ಮಾಗಡಿ ವಂದಿಸಿದರು. ಈ ಸಂದರ್ಭದಲ್ಲಿ ಸಮಾಜ ಸೇವಕ ರಾಮಣ್ಣ ಮುಕ್ಕುಂಪಿ ಅವರನ್ನು ಸನ್ಮಾನಿಸಲಾಯಿತು. ವರ್ಗಾವಣೆಗೊಂಡ ಶಿಕ್ಷಕ ನಾಗಪ್ಪ ಗಟ್ಟಿಗನೂರ ಹಾಗೂ ಗೌರವ ಶಿಕ್ಷಕರುಗಳನ್ನು ಬೀಳ್ಕೊಡಲಾಯಿತು.
0 comments:
Post a Comment