PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಮಾ. ೧೯ : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಗುರುವಾರದಂದು ಒಟ್ಟು ೧೪ ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಲೆಕ್ಕಶಾಸ್ತ್ರ ವಿಷಯ ಪರೀಕ್ಷೆಗೆ ಕೊಪ್ಪಳ ಜಿಲ್ಲೆಯ ೨೨೧೭ ವಿದ್ಯಾರ್ಥಿಗಳು ಹಾಜರಾಗಿದ್ದು, ೭೫ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಯಾವುದೇ ಡಿಬಾರ್ ಪ್ರಕರಣ ವರದಿಯಾಗಿಲ್ಲ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
  ಪಿಯುಸಿ ಪರೀಕ್ಷೆಯ ಲೆಕ್ಕಶಾಸ್ತ್ರ ವಿಷಯ ಪರೀಕ್ಷೆ ತೆಗೆದುಕೊಂಡಿರುವ ೨೨೯೨ ವಿದ್ಯಾರ್ಥಿಗಳ ಪೈಕಿ ೨೨೧೭ ವಿದ್ಯಾರ್ಥಿಗಳು ಹಾಜರಾಗಿದ್ದು, ೭೫ ವಿದ್ಯಾರ್ಥಿಗಳು ಗೈರಾಗಿದ್ದಾರೆ.  ಕೊಪ್ಪಳ ತಾಲೂಕಿನಲ್ಲಿ ೭೮೪ ವಿದ್ಯಾರ್ಥಿಗಳ ಪೈಕಿ ೭೫೯ ವಿದ್ಯಾರ್ಥಿಗಳು ಹಾಜರಾಗಿದ್ದು, ೨೫ ವಿದ್ಯಾರ್ಥಿಗಳು ಗೈರಾಗಿದ್ದಾರೆ.  ಗಂಗಾವತಿ ತಾಲೂಕಿನಲ್ಲಿ ೧೨೦೬ ವಿದ್ಯಾರ್ಥಿಗಳ ಪೈಕಿ ೧೧೬೭ ವಿದ್ಯಾರ್ಥಿಗಳು ಹಾಜರಿದ್ದು, ೩೯ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಕುಷ್ಟಗಿ ತಾಲೂಕಿನಲ್ಲಿ ೧೦೮ ವಿದ್ಯಾರ್ಥಿಗಳ ಪೈಕಿ ೧೦೬ ಹಾಜರಿದ್ದು, ೦೨ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಯಲಬುರ್ಗಾ ತಾಲೂಕಿನಲ್ಲಿ ೧೯೪ ವಿದ್ಯಾರ್ಥಿಗಳ ಪೈಕಿ ೧೮೫ ವಿದ್ಯಾರ್ಥಿಗಳು ಹಾಜರಾಗಿದ್ದು, ೦೯ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು  ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಎಸ್. ಶಿಂಧಾ  ತಿಳಿಸಿದ್ದಾರೆ.

Advertisement

0 comments:

Post a Comment

 
Top