PLEASE LOGIN TO KANNADANET.COM FOR REGULAR NEWS-UPDATES


ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ ತಾಲೂಕಿನ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಮಾ.೦೩ ರ ಸಂಜೆ ೫ ಗಂಟೆಗೆ ಆಯೋಜಿಸಲಾಗಿ
ದೆ.
  ಸಣ್ಣ ನೀರಾವರಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಕಾರ್ಯಕ್ರಮ ಉದ್ಘಾಟಿಸುವರು. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ,   ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್,  ಹಾಲಪ್ಪ ಆಚಾರ್, ಶರಣಪ್ಪ ಮಟ್ಟೂರ್, ಅಮರನಾಥ ಪಾಟೀಲ್, ಕರ್ನಾಟಕ ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ಜಿಲ್ಲಾ ಪಂಚಾಯತ್ ಸದಸ್ಯ ಟಿ.ಜನಾರ್ಧನ ಹುಲಿಗಿ, ತಾಲೂಕಾ ಪಂಚಾಯತ್ ಅಧ್ಯಕ್ಷೆ ವಿಶಾಲಾಕ್ಷಿ ವಿ.ಮಾಲಿಪಾಟೀಲ್, ಉಪಾಧ್ಯಕ್ಷೆ ಮುದ್ದವ್ವ ಆರ್.ಕರಡಿ, ಹುಲಿಗಿ ಗ್ರಾ.ಪಂ ಅಧ್ಯಕ್ಷ ಜಿ.ಪಾಲಾಕ್ಷಪ್ಪ, ಉಪಾಧ್ಯಕ್ಷೆ ಪಾರ್ವತಿ ರಾಮು, ತಾಲೂಕಾ ಪಂಚಾಯತ್ ಸದಸ್ಯೆ ಸುಶೀಲಮ್ಮ ಅಗಳಕೇರಾ, ಕೊಪ್ಪಳ ಡಿವೈಎಸ್‌ಪಿ ರಾಜೀವ್, ತಹಶೀಲ್ದಾರ ಪುಟ್ಟರಾಮಯ್ಯ, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಟಿ.ಕೃಷ್ಣಮೂರ್ತಿ, ಹುಲಿಗೆಮ್ಮ ದೇವಿ ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಸಿ.ಎಸ್.ಚಂದ್ರಮೌಳಿ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ. ತುಕಾರಾಮರಾವ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. 
  ಬಳಿಕ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮರಿಯಮ್ಮನ ಹಳ್ಳಿಯ  ಮಂಜವ್ವ ಜೋಗತಿ ಮತ್ತು ತಂಡದವರಿಂದ ಜೋಗತಿ ನೃತ್ಯ ಪ್ರದರ್ಶನ, ಯಲಬುರ್ಗಾದ ರೇವಣಪ್ಪ ಹಿರೇಕುರುಬರ ಮತ್ತು ತಂಡದವರಿಂದ ಡೊಳ್ಳು ಕುಣಿತ, ತಳಕಲ್ಲಿನ ನಾದ-ನೃತ್ಯ ಕಲಾ ತಂಡದವರಿಂದ ಸಮೂಹ ನೃತ್ಯ, ಗಂಗಾವತಿಯ ಸಂಜಯ್ ಹಂದ್ರಾಳ ಇವರಿಂದ ಸುಗಮ ಸಂಗೀತ,  ಕುಷ್ಟಗಿಯ ವಾ.ಹ. ಯಕ್ಕರನಾಳ ಅವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಹುಲಿಹೈದರ್‌ನ ಆಂಜನೇಯ ಗದ್ದಿಯವರಿಂದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ,   ಕುಷ್ಟಗಿಯ ಎಸ್.ಎಸ್. ಹಿರೇಮಠರಿಂದ ಹಿಂದೂಸ್ತಾನಿ ವಾದ್ಯ ಸಂಗೀತ (ತಬಲಾ ಸೋಲೋ), ಕೊಪ್ಪಳದ ರಿದಂ ಡ್ಯಾನ್ಸ್ ಅಕಾಡೆಮಿಯಿಂದ ಭರತನಾಟ್ಯ-ಶಿವತಾಂಡವ ನೃತ್ಯ ಪ್ರದರ್ಶನ, ತಾವರಗೇರಾದ ಶಿವರಾಜ ಶಾಸ್ತ್ರಿ ರಾಂಪೂರರಿಂದ ಕಥಾ ಕೀರ್ತನ, ಹುಲಿಗಿಯ ಶ್ರೀ ಭುವನೇಶ್ವರಿ ಕನ್ನಡ ಕಲಾ ಸಂಘದವರಿಂದ ’ವೀರ ಎಚ್ಚಮ್ಮ ನಾಯಕ’ ನಾಟಕ ಪ್ರದರ್ಶನ ಕಾರ್ಯಕ್ರಮಗಳು ನಡೆಯಲಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಟಿ.ಕೊಟ್ರಪ್ಪ ತಿಳಿಸಿದ್ದಾರೆ.  

Advertisement

0 comments:

Post a Comment

 
Top