PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ ಏ.   : ಇದೇ ಏ. ೧೧ ರಿಂದ ೩೦ ರವರೆಗೆ ಜರುಗಲಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಂತೆ  ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ವಿಚಾರಸಂಕಿರಣವನ್ನು ಏ. ೦೬ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಿದೆ.
  ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.  ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.  ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್, ಉಪವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಭೀಮಸಾ ಶಿಂಗೆ ಮುಖ್ಯ ಅತಿಥಿಯಾಗಿ ಭಾಗವಹಿಸುವರು.  ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿ. ಕಲ್ಲೇಶ್ ಹಾಗೂ ಸಮೀಕ್ಷೆ ಕಾರ್ಯಕ್ರಮದ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಸಿ.ವಿ. ಜಡಿಯವರ್ ಅವರು ವಿಶೇಷ ಉಪನ್ಯಾಸ ನೀಡುವರು.  ಈ ಕಾರ್ಯಕ್ರಮಕ್ಕೆ ಸಂಘ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳ ಪದಾಧಿಕಾರಿಗಳು, ಎಲ್ಲ ಸಮುದಾಯಗಳ ಮುಖಂಡರು ಆಗಮಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ವಾರ್ತಾಧಿಕಾರಿ ತುಕಾರಾಂರಾವ್ ಬಿ.ವಿ. ಅವರು   ಮನವಿ ಮಾಡಿಕೊಂಡಿದ್ದಾರೆ.

Advertisement

0 comments:

Post a Comment

 
Top