PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಏ.೨೨ (ಕರ್ನಾಟಕ ವಾರ್ತೆ) : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಬೆಂಗಳೂರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯಲ್ಲಿ ಮಹಿಳೆಯರು ಸ್ವಾವಲಂಬಿಗಳಾಗಲು ಹಾಗೂ ಮಾರ್ಗದರ್ಶನ ಪಡೆಯಲು ಮಹಿಳಾ ಸ್ವ-ಉದ್ಯೋಗ ಕೇಂದ್ರವನ್ನು ಪ್ರಾರಂಭಿಸಲಾಗಿದೆ.
ಕೊಪ್ಪಳದ ಜಿಲ್ಲಾಡಳಿತ ಭವನದ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಛೇರಿಯಲ್ಲಿ ಈ ಕೇಂದ್ರವನ್ನು ಆರಂಭಿಸಲಾಗಿದ್ದು, ಕೇಂದ್ರದಲ್ಲಿ ಆಪ್ತ ಸಮಾಲೋಚಕರಾಗಿ ಸಿಬ್ಬಂದಿ ಆಯ್ಕೆಯಾಗಿದ್ದಾರೆ. ಜಿಲ್ಲೆಯ ಮಹಿಳೆಯರು ಕೇಂದ್ರದ ಸದುಪಯೋಗ ಪಡೆದುಕೊಳ್ಳುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Advertisement

0 comments:

Post a Comment

 
Top