ಕೊಪ್ಪಳ, ಏ.೨೮ (ಕರ್ನಾಟಕ ವಾರ್ತೆ) : ಜಿಲ್ಲೆಯ ಎಲ್ಲಾ ಗ್ರಾಮಗಳ ನೀರಿನ ಟ್ಯಾಂಕ್‌ಗಳನ್ನು ಸ್ವಚ್ಛವಾಗಿ ತೊಳೆದು, ತಪ್ಪದೆ ಕ್ಲೋರಿನೇಷನ್ ಮಾಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾಂಕ್ರಾಮಿಕ ರೋಗಗಳ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮ ಕುರಿತು ಜಿಲ್ಲಾ ಪಂಚಾಯತ್‌ನ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ಬೇಸಿಗೆ ಆರಂಭವಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವುದು ಅತ್ಯವಶ್ಯಕವಾಗಿದೆ. ಬೇಸಿಗೆ ಕಾಲದಲ್ಲಿ ಹೆಚ್ಚಾಗಿ ಜನರನ್ನು ಬಾಧಿಸುವ ಕಾಲರಾ, ಕಾಮಾಲೆ, ವಿಷಮಶೀತ ಜ್ವರ, ಅತಿಸಾರ ಭೇದಿ ಮುಂತಾದ ರೋಗಗಳ ಮೂಲ ನೀರು ಆಗಿರುವುದರಿಂದ, ನೀರಿನ ಮೂಲಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರಮುಖ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿನ ನೀರಿನ ಟ್ಯಾಂಕ್‌ಗಳನ್ನು ಸ್ವಚ್ಛವಾಗಿ ತೊಳೆದು ಕ್ಲೋರಿನೇಷನ್ ಮಾಡಿಸಬೇಕು. ಹಳ್ಳಿಗಳಲ್ಲಿ ಸಾರ್ವಜನಿಕ ಕುಡಿಯುವ ನೀರಿನ ಮೂಲಗಳು ಶುದ್ಧವಾಗಿದ್ದರೂ, ಪೈಪ್‌ಲೈನ್ ಸೋರಿಕೆ, ಚರಂಡಿಯ ಪಕ್ಕದಲ್ಲಿಯೇ ಕುಡಿಯುವ ನೀರಿನ ಸಂಪರ್ಕ ಪಡೆಯುವುದರಿಂದ ರೋಗ ಹರಡಲು ಸುಲಭ ಮಾರ್ಗವಾಗಿದೆ. ಪೈಪ್‌ಲೈನ್ ಸೋರಿಕೆ ಸರಿಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೃಷ್ಣ ಉದಪುಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಕ್ಕಳ ಆರೋಗ್ಯ : ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ಈ ಬಾರಿ ಜಿಲ್ಲೆಯಲ್ಲಿ ಮಕ್ಕಳ ಅನಾರೋಗ್ಯ ಪ್ರಕರಣಗಳು ಹೆಚ್ಚಾಗಿವೆ. ಶಾಲೆಗಳಲ್ಲಿ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿರುವ ನೀರಿನ ತೊಟ್ಟಿ, ಬಿಸಿಯೂಟದ ಅಡುಗೆ ಕೋಣೆ, ಆಹಾರ ಸಾಮಗ್ರಿ ಇತ್ಯಾದಿಗಳನ್ನು ಸ್ವಚ್ಛವಾಗಿಡುವಲ್ಲಿ ಹೆಚ್ಚಿನ ಗಮನಹರಿಸಬೇಕಾಗಿದೆ. ಇದರ ಜೊತೆಗೆ ಅಡುಗೆ ಮಾಡುವವರ ವೈಯಕ್ತಿಕ ಸ್ವಚ್ಛತೆಯ ಬಗ್ಗೆಯೂ ನಿಗಾ ವಹಿಸಬೇಕು. ಶಾಲೆಯ ಸುತ್ತಲೂ ನೈರ್ಮಲ್ಯತೆ ಕಾಪಾಡಲು ಹೆಚ್ಚಿನ ಕ್ರಮ ಕೈಗೊಳ್ಳುವುದು ಅವಶ್ಯವಾಗಿದೆ ಎಂದರು.
ನಾಯಿ ಕಡಿತ : ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಈ ವರ್ಷ ಜಿಲ್ಲೆಯಲ್ಲಿ ೧೫೩೨ ನಾಯಿ ಕಡಿತ ಪ್ರಕರಣಗಳು ದಾಖಲಾಗಿದ್ದು, ಕಳೆದ ವರ್ಷ ಒಟ್ಟು ೫೬೭೮ ನಾಯಿ ಕಡಿತ ಪ್ರಕರಣಗಳು ದಾಖಲಾಗಿವೆ. ನಾಯಿಗಳ ಉಪಟಳ ಹೆಚ್ಚಾಗಲು ಮಾಂಸದಂಗಡಿಗಳು ಕಾರಣವಾಗಿದ್ದು, ಅನುಪಯುಕ್ತ ಮಾಂಸವನ್ನು ಎಲ್ಲೆಂದರಲ್ಲಿ ಎಸೆಯದಂತೆ ಮಾಂಸದಂಗಡಿಗಳ ಮಾಲೀಕರಿಗೆ ಸೂಕ್ತ ಎಚ್ಚರಿಕೆ ನೀಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಸೊಳ್ಳೆಗಳ ನಿಯಂತ್ರಣ : ಸೊಳ್ಳೆಗಳ ಮೂಲಕ ಹರಡುವ ಮಲೇರಿಯಾ, ಡೆಂಗ್ಯೂ, ಚಿಕುನ್ ಗುನ್ಯ ರೋಗಗಳ ಬಗ್ಗೆ ಜಿಲ್ಲೆಯಲ್ಲಿ ಹೆಚ್ಚಿನ ಮುತುವರ್ಜಿ ವಹಿಸುವುದು ಪ್ರಮುಖವಾಗಿದ್ದು, ಮನೆಗಳ ಸುತ್ತಮುತ್ತ ನೀರು ನಿಲ್ಲದಂತೆ ಹಾಗೂ ಮನೆಗಳಲ್ಲಿ ನೀರಿನ ಸಂಗ್ರಹಗಾರಗಳನ್ನು ತೆರೆದಿಡದೆ, ಸೂಕ್ತವಾಗಿ ಮುಚ್ಚಲು ಮತ್ತು ತ್ಯಾಜ್ಯಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಕೃಷ್ಣ ಡಿ.ಉದಪುಡಿ ಅವರು ತಿಳಿಸಿದರು.
ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಎಂ.ಎಂ. ಕಟ್ಟಿಮನಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಈ ವರ್ಷ ಹೆಚ್೧ ಎನ್೧ ರೋಗದ ೫ ಪ್ರಕರಣಗಳು ಖಚಿತಪಟ್ಟಿದ್ದು, ಗಂಗಾವತಿ ತಾಲೂಕಿನಲ್ಲಿ ಒಂದು ಮರಣ ಪ್ರಕರಣ ವರದಿಯಾಗಿದೆ. ಉಳಿದಂತೆ ಈ ವರ್ಷ ೭೨೪-ಟೈಫಾಯ್ಡ್, ೪೩- ಹಾವುಕಡಿತ ಪ್ರಕರಣ ದಾಖಲಾಗಿದೆ ಎಂದರು.
ಸಭೆಯಲ್ಲಿ ತಾಲೂಕಾ ವೈದ್ಯಾಧಿಕಾರಿ ಡಾ|| ಎಸ್.ಬಿ. ದಾನರೆಡ್ಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ವಸಂತಪ್ರೇಮಾ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

0 comments:
Post a Comment