PLEASE LOGIN TO KANNADANET.COM FOR REGULAR NEWS-UPDATES

 : ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನಿಂದ “ಮಹಿಳೆ ಮತ್ತು ವಿಜ್ಞಾನ” ಯೋಜನೆಯಡಿ   ರಾಜ್ಯಮಟ್ಟದ ಮಹಿಳಾ ವಿಜ್ಞಾನ ಸಮಾವೇಶ  ಏ. ೦೮ ಮತ್ತು ೦೯ ರಂದು ಎರಡು ದಿನಗಳ ಕಾಲ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿರುವ ಪ್ರಾದೇಶಿಕ ವಿಜ್ಞಾನ ಕೇಂದ್ರದ ಜಂಟಿ ಸಹಯೋಗದಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
      ಪ್ರಸ್ತುತ ರಾಜ್ಯಮಟ್ಟದ ಮಹಿಳಾ ವಿಜ್ಞಾನ ಸಮಾವೇಶದಲ್ಲಿ ಪ್ರತಿ ಜಿಲ್ಲೆಯಿಂದ ತಲಾ ಇಬ್ಬರಂತೆ ಆಯ್ದ ಮಹಿಳಾ ಕಾರ್ಯಕರ್ತರು, ಸ್ತ್ರೀ ಶಕ್ತಿ ಕಾರ್ಯಕರ್ತರು, ಮಹಿಳಾ ಸಂಘಟನೆಗಳ ಪದಾಧಿಕಾರಿಗಳು ಹಾಗು ಆಯ್ದ ಶಿಕ್ಷಣ ಮಹಾವಿದ್ಯಾಲಯಗಳ ವಿದ್ಯಾರ್ಥಿನಿಯರು (ಅಂದಾಜು ೧೨೫ ಜನ) ಭಾಗವಹಿಸಲಿದ್ದಾರೆ. ಇದಲ್ಲದೆ ಮಹಿಳಾ ವಿಜ್ಞಾನಿಗಳು, ವಿಜ್ಞಾನ ಸಂವಹನಕಾರರು, ಶಿಕ್ಷಣ ತಜ್ಞರು, ಪತ್ರಕರ್ತರೂ ಸಹ ಸಮಾವೇಶದಲ್ಲಿ ಭಾಗವಹಿಸಿ ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ.   ಸಮಾವೇಶದ ಉದ್ಘಾಟನಾ ಕಾರ್ಯಕ್ರಮವನ್ನು ಏ. ೦೮ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಕರ್ನಾಟಕ ವಿಶ್ವವಿದ್ಯಾಲಯ ಆವರಣದಲ್ಲಿರುವ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.  ಸಮಾವೇಶವನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ರವರು ಉದ್ಘಾಟಿಸಲಿದ್ದು, ಪ್ರಾದೇಶಿಕ ಕೇಂದ್ರದ ನಿರ್ದೇಶಕ ಡಾ. ಉದಯ ರಾಯ್ಕರ್ ಹಾಗೂ ಕರಾವಿಪ ಖಜಾಂಚಿ ಗಿರೀಶ್ ಕಡ್ಲೇವಾಡ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಜ್ಞಾನ ಪರಿಷತ್ತಿನ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸದಸ್ಯ ಎಸ್.ವಿ. ಸಂಕನೂರ ರವರು ವಹಿಸುವರು .


Advertisement

0 comments:

Post a Comment

 
Top