PLEASE LOGIN TO KANNADANET.COM FOR REGULAR NEWS-UPDATES


ಕೊಪ್ಪಳ, ಏ.೨೮ (ಕರ್ನಾಟಕ ವಾರ್ತೆ): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ರೂಪಿಸಿದ್ದು, ೨೦೧೫-೧೬ ನೇ ಸಾಲಿಗಾಗಿ ಸ್ವಾವಲಂಬನ ಸಾಲದ ಯೋಜನೆ, ಅರಿವು ಸಾಲ ಯೋಜನೆ, ಶ್ರಮಶಕ್ತಿ, (ಮೈಕ್ರೋ) ಸಣ್ಣ ಸಾಲ ಮತ್ತು ಸಹಾಯಧನ ಯೋಜನೆ, ಗಂಗಾ ಕಲ್ಯಾಣ ಯೋಜನೆ, ನಿವೇಶನ ಖರೀದಿ ಮತ್ತು ಗೃಹಸಾಲದ ಮೇಳಿನ ಬಡ್ಡಿ ಸಹಾಯಧನ ಯೋಜನೆ, ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬಯಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 
    ಅರ್ಜಿ ಸಲ್ಲಿಸಲಿಚ್ಛಿಸುವವರು ಅಲ್ಪಸಂಖ್ಯಾತರಾದ ಮುಸ್ಲಿಂ, ಜೈನ್, ಭೌದ್ಧರು, ಸಿಖ್ಖರು, ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು.  ಕರ್ನಾಟಕದಲ್ಲಿ ಕನಿಷ್ಠ ೧೫ ವರ್ಷ ವಾಸವಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಿಗೆ ರೂ.೮೧,೦೦೦/- ಮತ್ತು ನಗರ ಪ್ರದೇಶದವರಿಗೆ ರೂ.೧,೦೩,೦೦೦/- ಮೀರಬಾರದು. ಅರಿವು ಯೋಜನೆಯಡಿಯಲ್ಲಿ ಮಾತ್ರ ಕುಟುಂಬದ ವಾರ್ಷಿಕ ಆದಾಯ ರೂ.೪,೫೦,೦೦೦/- ಮೀರಬಾರದು.  ವಯೋಮಿತಿ ೧೮ ರಿಂದ ೫೫ ವರ್ಷದೊಳಗಿರಬೇಕು.  ವಿಳಾಸದ ಧೃಢೀಕರಣಕ್ಕಾಗಿ ಆಧಾರ್(ಯುಐಡಿ) ಪ್ರತಿಯನ್ನು ಸಲ್ಲಿಸಬೇಕು. ಈ ಹಿಂದೆ ನಿಗಮದ ಸೌಲಭ್ಯವನ್ನು ಪಡೆದವರು ಅರ್ಜಿ ಸಲ್ಲಿಸಲು ಅರ್ಹರಲ್ಲ. ಈ ಯೋಜನೆಗಳಲ್ಲಿ ಮಹಿಳೆಯರಿಗೆ ಶೇಕಡಾ ೩೩ ರಷ್ಟು ಮೀಸಲಾತಿ ಇದ್ದು, ಅಂಗವಿಕಲರಿಗೆ ಶೇಕಡಾ ೩ ರಷ್ಟು ಮೀಸಲಾತಿ ಕಲ್ಪಿಸಲಾಗಿದೆ.
     ಸಾಲದ ಅರ್ಜಿ ನಮೂನೆಯನ್ನು ನಿಗಮದ ವೆಬ್‌ಸೈಟ್
www.kmdc.kar.nic.in CxÀªÁ http://kmdc.karnataka.gov.in ಮೂಲಕ ಪಡೆಯಬಹುದಾಗಿದೆ.  ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಜಿಲ್ಲಾಡಳಿತ ಭವನ, ಕೊಪ್ಪಳ ಇವರಿಗೆ ಮೇ.೧೫ ರೊಳಗಾಗಿ ಸಲ್ಲಿಸಬೇಕು.  ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಜಿಲ್ಲಾಡಳಿತ ಭವನ, ಕೊಪ್ಪಳ, ದೂರವಾಣಿ ಸಂ: ೦೮೫೩೯-೨೨೫೦೦೮ ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

Advertisement

0 comments:

Post a Comment

 
Top