ಕೊಪ್ಪಳ, ಏ.೨೯ (ಕರ್ನಾಟಕ ವಾರ್ತೆ) : ಕೊಪ್ಪಳ ತಾಲೂಕಾ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಾರ್ಯಾಲಯ ವತಿಯಿಂದ ಪ್ರಸಕ್ತ ಸಾಲಿಗಾಗಿ ಮಹಿಳಾ ಅಭ್ಯರ್ಥಿಗಳಿಗೆ ಹೊಲಿಗೆ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲಿಚ್ಛಿಸುವ ಅಭ್ಯರ್ಥಿಗಳು ಕನಿಷ್ಟ ೭ನೇ ತರಗತಿ ತೇರ್ಗಡೆ ಹೊಂದಿರಬೇಕು. ವಯೋಮಿತಿ ೧೮ ರಿಂದ ೩೫ ವರ್ಷದೊಳಗಿರಬೇಕು. ಯಾವುದೇ ಶಾಲಾ, ಕಾಲೇಜುಗಳಲ್ಲಿ ಪ್ರವೇಶ ಪಡೆದಿರಬಾರದು. ಈಗಾಗಲೇ ತರಬೇತಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅನರ್ಹರು. ಭರ್ತಿ ಮಾಡಿದ ನಿಗಿದಿತ ಅರ್ಜಿ ನಮೂನೆಯ ಜೊತೆ ಜಾತಿ, ಆದಾಯ ಪ್ರಮಾಣ ಪತ್ರ, ಶೈಕ್ಷಣಿಕ ದಾಖಲಾತಿ ಪ್ರಮಾಣಪತ್ರ, ಅಂಕಪಟ್ಟಿ, ಶಾಲಾ ವರ್ಗಾವಣೆ ಪ್ರಮಾಣಪತ್ರ ಹಾಗೂ ಧೃಢೀಕರಣದ ನಕಲುಗಳನ್ನು ಲಗತ್ತಿಸಿ, ಮೇ. ೨೩ ರೊಳಗಾಗಿ ತಾಲೂಕಾ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಾರ್ಯಾಲಯ, ಕೊಪ್ಪಳ ಇವರಿಗೆ ಸಲ್ಲಿಸಬಹುದಾಗಿದೆ. ಪ್ರವರ್ಗವಾರು ಮೀಸಲಾತಿ ಅನ್ವಯ ೨೦ ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಿಕೊಳ್ಳಲಾಗುವುದು. ನಿಗದಿತ ಅವಧಿಯ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಹೊಲಿಗೆ ತರಬೇತಿಗೆ ಅರ್ಜಿ ಆಹ್ವಾನ.

0 comments:
Post a Comment