PLEASE LOGIN TO KANNADANET.COM FOR REGULAR NEWS-UPDATES

  ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಅವಧಿಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮೇ 5 ರವರೆಗೆ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮೇ 10 ರವರೆಗೆ ವಿಸ್ತರಿಸಲಾಗಿದೆ.
ಇದುವರೆಗೆ ಸಮೀಕ್ಷೆಗೆ ಒಳಪಡದಿರುವ ಕುಟುಂಬಗಳನ್ನು ಸಮೀಕ್ಷೆಗೆ ಒಳಪಡಿಸಲು, ಸಾರ್ವಜನಿಕರಿಗೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ಕಲ್ಪಿಸಲು ಹಾಗೂ ಯಾವುದಾದರು ನ್ಯೂನತೆಗಳಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಅವುಗಳನ್ನು ಈ ಅವಧಿಯೊಳಗೆ ಸರಿಪಡಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.

Advertisement

0 comments:

Post a Comment

 
Top