ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಗೊಳಪಡುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ೬ ನೇ ತರಗತಿಗೆ ಖಾಲಿ ಇರುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ನಡೆದ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪಡೆದ ಅಂಕಗಳ ಆಧಾರದಲ್ಲಿ ಸೀಟುಗಳನ್ನು ಹಂಚಿಕೆ ಮಾಡಲು ಮೇ. ೧೬ ರಂದು ಬೆ. ೧೦ ಗಂಟೆಗೆ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಕೌನ್ಸಿಲಿಂಗ್ ಏರ್ಪಡಿಸಲಾಗಿದೆ.
ಕೌನ್ಸಿಲಿಂಗ್‌ಗೆ ಅರ್ಹತೆ ಪಡೆದ ವಿದ್ಯಾರ್ಥಿಗಳಿಗೆ ಸಂದರ್ಶನ ಪತ್ರವನ್ನು ವಿದ್ಯಾರ್ಥಿಗಳ ಸ್ವ-ವಿಳಾಸಕ್ಕೆ ಕಳುಹಿಸಲಾಗಿದ್ದು, ವಿದ್ಯಾರ್ಥಿಗಳ ಪಟ್ಟಿಯನ್ನು ಜಿಲ್ಲಾ ಬಿಸಿಎಂ ಅಧಿಕಾರಿಗಳ ಕಚೇರಿ ಹಾಗೂ ಆಯಾ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಲಭ್ಯವಿರುತ್ತದೆ. ವಿದ್ಯಾರ್ಥಿಗಳು ಪ್ರವೇಶ ಪರೀಕ್ಷಾ ಗುರುತಿನ ಚೀಟಿ, ಮೂಲ ವರ್ಗಾವಣೆ ಪ್ರಮಾಣ ಪತ್ರ, ಮೂಲ ಜಾತಿ, ಆದಾಯ ಪ್ರಮಾಣ ಪತ್ರ, ಜೊತೆಗೆ ಅಗತ್ಯ ಪ್ರಮಾಣ ಪತ್ರಗಳ ಮೂಲ ಪ್ರತಿಗಳೊಂದಿಗೆ ಕೌನ್ಸಿಲಿಂಗ್‌ಗೆ ಹಾಜರಾಗಬೇಕು ಎಂದು ಜಿಲ್ಲಾ ಬಿಸಿಎಂ ಅಧಿಕಾರಿ ಬಿ. ಕಲ್ಲೇಶ್ ತಿಳಿಸಿದ್ದಾರೆ.
0 comments:
Post a Comment