ಹೈದ್ರಾಬಾದ್-ಕರ್ನಾಟಕ ಪ್ರದೇಶದಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆಯಿಂದ ಬೆಳೆ ಹಾನಿ ಅನುಭವಿಸಿದ ರೈತರಿಗೆ ವಿಶೇಷ ಪ್ರಕರಣವೆಂದು ಪರಿಗಣಿಸಿ, ಹೆಚ್ಚಿನ ಪರಿಹಾರ ನೀಡುವಂತೆ ಹಲವು ಸಂಸದರು ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಾಮವಿಲಾಸ್ ಪಾಸ್ವಾನ್ ಅವರನ್ನು ನವದೆಹಲಿಯಲ್ಲಿ ಈಚೆಗೆ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಕೂಡಲೇ ಭತ್ತ ಖರೀದಿ ಕೇಂದ್ರಗಳನ್ನು ಸ್ಥಾಪಿಸಬೇಕು. ಈ ಭಾಗದಲ್ಲಿ ಇತ್ತೀಚೆಗೆ ಸುರಿದ ಅಕಾಲಿಕ ಆಲಿಕಲ್ಲು ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ರೈತರು ತೀವ್ರ ನಷ್ಟ ಅನುಭವಿಸಿದ್ದಾರೆ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ, ರೈತರಿಗೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ, ಬಳ್ಳಾರಿ ಸಂಸದ ಬಿ. ಶ್ರೀರಾಮುಲು, ಬೀದರ್ ಸಂಸದ ಮಲ್ಲಿಕಾರ್ಜುನ ಖೂಬಾ ಅವರು ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಸಂಸದ ಕೆ.ವಿರುಪಾಕ್ಷಪ್ಪ, ಬಸನಗೌಡ ಬ್ಯಾಗವಾಟ್, ರಾಜಶೇಖರ ಪಾಟೀಲ್ ಸಿಂಧನೂರು ಉಪಸ್ಥಿತರಿದ್ದರು.
0 comments:
Post a Comment