: ಕೊಪ್ಪಳ ತಾಲೂಕಿನ ಹುಲಿಗಿಯ ಶ್ರೀ ಹುಲಿಗೆಮ್ ದೇವಿ ಜಾತ್ರಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ, ಮುಂಜಾಗ್ರತಾ ಕ್ರಮವಾಗಿ ಮೇ. ೧೨ ರಿಂದ ಮದ್ಯಪಾನ, ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆರ್.ಆರ್. ಜನ್ನು ಆದೇಶ ಹೊರಡಿಸಿದ್ದಾರೆ.
ಹುಲಿಗೆಮ್ಮ ದೇವಿ ಜಾತ್ರೆ ನಿಮಿತ್ಯ ಮೇ. ೧೨ ರಂದು ಬೆಳಿಗ್ಗೆ ೬ ಗಂಟೆಯಿಂದ ಮೇ. ೧೩ ರ ಬೆಳಿಗ್ಗೆ ೦೬ ಗಂಟೆಯವರೆಗೆ ಹುಲಿಗಿ ಹಾಗೂ ಮುನಿರಾಬಾದ್ ಆರ್.ಎಸ್. ಗ್ರಾಮಗಳ ವ್ಯಾಪ್ತಿಯ ಪ್ರದೇಶದಲ್ಲಿ ಮದ್ಯಪಾನ, ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
0 comments:
Post a Comment