ಕೊಪ್ಪಳ ನಗರದಲ್ಲಿ ಮೇ. ೧೨ ಮತ್ತು ೧೩ ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆರ್.ಆರ್. ಜನ್ನು ಆದೇಶ ಹೊರಡಿಸಿದ್ದಾರೆ.
ಕೊಪ್ಪಳ ನಗರದ ಬಾಲಕರ ಸರ್ಕಾರಿ ಪ.ಪೂ. ಕಾಲೇಜು, ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜು ಮತ್ತು ಶ್ರೀ ಗವಿಸಿದ್ದೇಶ್ವರ ಪ.ಪೂ. ಕಾಲೇಜಿನಲ್ಲಿ ಮೇ. ೧೨ ಮತ್ತು ೧೩ ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆಯದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪರೀಕ್ಷಾ ಕೇಂದ್ರ ಸುತ್ತ ೨೦೦ ಮೀ. ವ್ಯಾಪ್ತಿಯಲ್ಲಿ, ಪರೀಕ್ಷಾ ದಿನದಂದು ಬೆಳಿಗ್ಗೆ ೮ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದರನ್ವಯ ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್‌ಟಿಡಿ, ಮೊಬೈಲ್, ಜೆರಾಕ್ಸ್, ಟೈಪಿಂಗ್ ಮುಂತಾದ ಚಟುವಟಿಕೆಗೆ ಅಲ್ಲದೆ ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ
0 comments:
Post a Comment