PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಜೂ.೩೦ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪ್ರಸಕ್ತ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪರೀಕ್ಷಾ ಅರ್ಜಿ ಹಾಗೂ ನಿಯಮಾವಳಿಗಳನ್ನು ೧೦ ರೂ. ಶುಲ್ಕ ಪಾವತಿಸಿ, ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ (ಬೆಂಗಳೂರು) ಜುಲೈ.೦೧ ರಿಂದ ಪಡೆಯಬಹುದಾಗಿದೆ ಅಥವಾ ಕನ್ನಡ ಸಾಹಿತ್ಯ ಪರಿಷತ್ತು ಹೆಸರಿಗೆ ೧೫ ರೂ. ಮನಿಯಾರ್ಡರ್ ಮಾಡಿ, ಅರ್ಜಿಯನ್ನು ಅಂಚೆ ಮೂಲಕ ಪಡೆಯಬಹುದಾಗಿದೆ. ಅಲ್ಲದೇ ಪರೀಕ್ಷಾ ಅರ್ಜಿಗಳನ್ನು ಪರಿಷತ್ತಿನ ವೆಬ್‌ಸೈಟ್ ತಿತಿತಿ.ಞಚಿsಚಿಠಿಚಿ.iಟಿ ಮೂಲಕ ಸಹ ಪಡೆದುಕೊಳ್ಳಬಹುದಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಪಡೆದುಕೊಳ್ಳುವವರು ಪರೀಕ್ಷಾ ಶುಲ್ಕದೊಂದಿಗೆ ೧೦ ರೂ. ಅರ್ಜಿ ಶುಲ್ಕವನ್ನು ಪ್ರತ್ಯೇಕವಾಗಿ ಪಾವತಿಸಬೇಕು. ೨೦೧೫ ರ ಡಿಸೆಂಬರ್ ಕೊನೆಯ ವಾರದಲ್ಲಿ ಪರೀಕ್ಷೆಗಳು ನಡೆಯಲಿದ್ದು, ಆಗಸ್ಟ್ ೩೧ ಅರ್ಜಿ ಸಲ್ಲಿಸಲು ಕೊನೆ ದಿನಾಂಕವಾಗಿದೆ. ನಂತರ ಸೆಪ್ಟೆಂಬರ್ ೧೫ ರವರೆಗೆ ದಂಡ ಶುಲ್ಕ ೫೦ ರೂ. ಯನ್ನು ಹೆಚ್ಚುವರಿಯಾಗಿ ನೀಡಿಯೂ ಸಹ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-೧೮, ದೂರವಾಣಿ ಸಂಖ್ಯೆ : ೦೮೦-೨೬೬೨೩೫೮೪ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದೆ.


ಕೊಪ್ಪಳ, ಜೂ.೩೦ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಆರ್.ಕೆ.ವಿ.ವೈ ಯೋಜನೆಯ ತ್ವರಿತ ಮೇವು ಅಭಿವೃದ್ಧಿ ಕಾರ್ಯಕ್ರಮದಡಿ ಶೇಕಡಾ ೨೫ ರಷ್ಟು ಸಹಾಯಧನ ಮಿತಿಗೊಳಪಟ್ಟು ವಿವಿಧ ಸಾಮರ್ಥ್ಯದ ಮೇವು ಕತ್ತರಿಸುವ ಯಂತ್ರಗಳನ್ನು ನೀಡಲಾಗುತ್ತಿದ್ದು. ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
     ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ವಿವಿಧ ಸಾಮರ್ಥ್ಯದ ಮೇವು ಕತ್ತರಿಸುವ ಯಂತ್ರಗಳನ್ನು ಸರ್ಕಾರದ ಆದೇಶದಂತೆ ಶೇಕಡಾ ೨೫ ಅಥವಾ ರೂ. ೬೨೫೦ ನಷ್ಟು ಸಹಾಯಧನ ಮಿತಿಗೊಳಪಟ್ಟು ನೀಡಲು ಉದ್ದೇಶಿಸಲಾಗಿದ್ದು, ಆಸಕ್ತ ರೈತರು, ಸಂಘ ಸಂಸ್ಥೆಗಳು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.
     ೦೧, ೦೨ ಮತ್ತು ೦೩ ಹೆಚ್.ಪಿ ಸಾಮರ್ಥ್ಯದ (ಸಿಂಗಲ್ ಫೇಸ್ ಮೋಟಾರು) ಮೇವು ಕತ್ತರಿಸುವ ಯಂತ್ರಗಳಿಗೆ ಕ್ರಮವಾಗಿ ರೂ. ೧೭,೦೦೦, ರೂ. ೨೧,೮೦೦ ಮತ್ತು ೨೭,೨೦೦ ರೂ. ದರ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲಿಚ್ಛಿಸುವವರು ಹತ್ತಿರದ ಪಶುವೈದ್ಯ ಸಂಸ್ಥೆ ಅಧಿಕಾರಿ ಅಥವಾ ಸಿಬ್ಬಂದಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಶುಪಾಲನಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Advertisement

0 comments:

Post a Comment

 
Top