ಕೊಪ್ಪಳ, ಜೂ. ೨೨ (ಕರ್ನಾಟಕ ವಾರ್ತೆ) : ಜಿಲ್ಲಾ ಹಿಂದುಳಿದ ವರ್ಗಗಳ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಹಿಂದುಳಿದ ವರ್ಗಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಸಕ್ತ ಸಾಲಿನಲ್ಲಿ ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮದಡಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಶೇ.೯೦ ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
೨೦೧೫ ರ ಏಪ್ರಿಲ್ ತಿಂಗಳಿನಲ್ಲಿ ನಡೆದ ಎಸ್.ಎಸ್.ಎಲ್.ಸಿ, ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡಾ ೯೦ ಕ್ಕಿಂತ ಹೆಚ್ಚು ಅಂಕ ಗಳಿಸಿರುವ ರಾಜ್ಯದ ಪ್ರವರ್ಗ-೧, ೨ಎ, ೩ಎ ಹಾಗೂ ೩ಬಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಜುಲೈ.೧೫ ಕೊನೆ ದಿನಾಂಕವಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ವೆಬ್‌ಸೈಟ್
www.backwardclasses.kar.nic.in ನಿಂದ ಪಡೆಯಬಹುದು. ಅಥವಾ ಕಛೇರಿ ದೂರವಾಣಿ ಸಂಖ್ಯೆ : ೦೮೦-೪೪೫೫೪೪೪೪, ಮೊಬೈಲ್ ಸಂಖ್ಯೆ: ೯೪೮೦೮೧೮೦೧೩, ೯೪೮೦೮೧೮೦೧೦ ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

0 comments:
Post a Comment