ಕೊಪ್ಪಳ, ಜೂ. ಭಾರತ ಸರ್ಕಾರವು ಮಕ್ಕಳ ಅಭಿವೃದ್ದಿ, ಮಕ್ಕಳ ರಕ್ಷಣೆ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ 10 ವರ್ಷಕ್ಕಿಂತ ಹೆಚ್ಚಿನ ಸೇವೆಯನ್ನು ಸಲ್ಲಿಸಿರುವ ವ್ಯಕ್ತಿಗಳನ್ನು ಗುರುತಿಸಿ ರಾಜೀವಗಾಂಧಿ ಮಾನವಸೇವಾ ಪ್ರಶಸ್ತಿಯನ್ನು 3 ವ್ಯಕ್ತಿಗಳಿಗೆ ನೀಡಿ ಗೌರವಿಸಲಾಗುತ್ತಿದ್ದು, ಈ ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಗಾಗಿ ಆಯ್ಕೆ ಮಾಡುವ 3 ವ್ಯಕ್ತಿಗಳು ಮಕ್ಕಳ ಶ್ರೇಯೋಭಿವೃದ್ಧಿಗಾಗಿ 10 ವರ್ಷಗಳಿಗೂ ಮೇಲ್ಪಟ್ಟು ಕಾರ್ಯವನ್ನು ನಿರ್ವಹಿಸಿರಬೇಕು. ಸಂಘ-ಸಂಸ್ಥೆಗಳಲ್ಲಿ ವೇತನ ಪಡೆಯುವ ವ್ಯಕ್ತಿಗಳು ಈ ಪ್ರಶಸ್ತಿಗೆ ಅರ್ಹರಿರುವುದಿಲ್ಲ. ಈ ಪ್ರಶಸ್ತಿ ಆಯ್ಕೆಯು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ವ್ಯಕ್ತಿಗಳು ಮಾಡಿರುವ ಕೆಲಸದ ಗುಣಮಟ್ಟದ ಮೇಲೆ ಅವಲಂಬಿತವಾಗಿರುತ್ತದೆ. ಪ್ರಶಸ್ತಿಯು ರೂ. 1.00 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.
ಅದೇ ರೀತಿಯಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಹಲವು ವರ್ಷ ಅಸಾಧಾರಣ ಸೇವೆ ಸಲ್ಲಿಸಿದ 3 ವ್ಯಕ್ತಿಗಳು ಹಾಗೂ 5 ಸಂಸ್ಥೆಗಳ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿದ್ದು, ಪ್ರತಿ ವ್ಯಕ್ತಿಗೆ ನೀಡುವ ಪ್ರಶಸ್ತಿಯು ರೂ. 1.00 ಲಕ್ಷ, ಪ್ರಶಸ್ತಿ ಪತ್ರ ಮತ್ತು ಪ್ರತಿ ಸಂಸ್ಥೆಗೆ ನೀಡುವ ಪ್ರಶಸ್ತಿಯು ರೂ. 3.00 ಲಕ್ಷ ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಸಂಘ-ಸಂಸ್ಥೆಗಳಲ್ಲಿ ವೇತನ ಪಡೆಯುವ ವ್ಯಕ್ತಿಗಳು ಈ ಪ್ರಶಸ್ತಿಗೆ ಅರ್ಹರಿರುವುದಿಲ್ಲ. ಈ ಪ್ರಶಸ್ತಿ ಆಯ್ಕೆಯು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಮಾಡಿರುವ ಕೆಲಸದ ಗುಣಮಟ್ಟದ ಮೇಲೆ ಅವಲಂಬಿತವಾಗಿರುತ್ತದೆ.
ರಾಜ್ಯ ಸರ್ಕಾರದಿಂದ ರಚಿಸಲ್ಪಟ್ಟಿರುವ ಸಮಿತಿಯು ಪ್ರಶಸ್ತಿಗಳಿಗೆ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ, ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿಗಳು ಹಾಗೂ ಸಂಸ್ಥೆಗಳನ್ನು ಆಯ್ಕೆ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತದೆ. 2015ನೇ ಸಾಲಿಗೆ ರಾಜೀವಗಾಂಧಿ ಮಾನವಸೇವಾ ಪ್ರಶಸ್ತಿಗಾಗಿ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಗಾಗಿ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕೊಪ್ಪಳ ಇವರ ಕಛೇರಿಯಲ್ಲಿ ಪಡೆಯಬಹುದಾಗಿದೆ. ಅರ್ಜಿಯನ್ನು ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಿ ದ್ವಿ ಪ್ರತಿಯಲ್ಲಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕೊಪ್ಪಳ ಇವರಿಗೆ ಜೂ.25 ರೊಳಗಾಗಿ ಸಲ್ಲಿಸಬಹುದು
Home
»
»Unlabelled
» ರಾಷ್ಟ್ರ ಪ್ರಶಸ್ತಿ : ಅರ್ಜಿ ಆಹ್ವಾನ
Advertisement
Subscribe to:
Post Comments (Atom)
0 comments:
Post a Comment