ಕೊಪ್ಪಳ ಜೂ. ೨೯ ಕೊಪ್ಪಳ ಜಿಲ್ಲೆಯಲ್ಲಿ ತಪ್ಪು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿ ಪಡೆದಿರುವ ಅನರ್ಹರು ತಮ್ಮ ಬಿಪಿಎಲ್ ಪಡಿತರ ಚೀಟಿಯನ್ನು ಜು. ೩೦ ರ ಒಳಗಾಗಿ ಹಿಂದಿರುಗಿಸುವಂತೆ ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಸೂಚನೆ ನೀಡಿದ್ದಾರೆ.ಜಿಲ್ಲೆಯಲ್ಲಿ ಕೆಲ ಕುಟುಂಬಗಳು ಬಿಪಿಎಲ್ ಪಡಿತರ ಚೀಟಿ ಪಡೆಯಲು ಅರ್ಹರಲ್ಲದಿದ್ದರೂ, ಇಲಾಖೆಗೆ ತಪ್ಪು ಮಾಹಿತಿಗಳನ್ನು ನೀಡಿ, ಪಡಿತರ ಚೀಟಿಗಳನ್ನು ಪಡೆದುಕೊಂಡಿದ್ದರೆ, ಅಂತಹವರು ತಮ್ಮ ಬಿಪಿಎಲ್ ಪಡಿತರ ಚೀಟಿಯನ್ನು ಸಂಬಂಧಪಟ್ಟ ತಾಲೂಕು ಕಚೇರಿಗಳಿಗೆ ಜು. ೩೦ ರ ಒಳಗಾಗಿ ಹಿಂದಿರುಗಿಸಬೇಕು. ನಂತರದಲ್ಲಿ ಇಲಾಖೆಯ ಪರಿಶೀಲನೆ ಸಂದರ್ಭದಲ್ಲಿ ಅನರ್ಹರು ಪಡಿತರ ಚೀಟಿಗಳನ್ನು ಹೊಂದಿರುವುದು ಪತ್ತೆಯಾದಲ್ಲಿ, ಅಂತಹವರ ವಿರುದ್ಧ ಐಪಿಸಿ, ಅಗತ್ಯ ವಸ್ತುಗಳ ಕಾಯ್ದೆ ೧೯೫೫ ಹಾಗೂ ಅನಧಿಕೃತ ಪಡಿತರ ಚೀಟಿಗಳನ್ನು ಹೊಂದಿದ ನಿಯಂತ್ರಣಾದೇಶ ೧೯೭೭ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇಂತಹ ಕಾನೂನು ಕ್ರಮಗಳಿಗೆ ಅವಕಾಶ ನೀಡದೆ, ಅನರ್ಹರು ತಮ್ಮ ಬಿಪಿಎಲ್ ಪಡಿತರ ಚೀಟಿಗಳನ್ನು ಸಂಬಂಧಪಟ್ಟ ತಾಲೂಕು ಕಚೇರಿಗಳಿಗೆ ಜು. ೩೦ ರ ಒಳಗಾಗಿ ಹಿಂದಿರುಗಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
Subscribe to:
Post Comments (Atom)
0 comments:
Post a Comment