ಕೊಪ್ಪಳ, ಜೂ.೩೦ ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ತಮ್ಮ ವೈಯಕ್ತಿಕ ದಾಖಲೆಗಳನ್ನು ಗಣಕೀಕೃತ ವ್ಯವಸ್ಥೆಯಲ್ಲಿ ಡಿಜಿಟಲ್ ಲಾಕರ್‌ನಲ್ಲಿ ಸಂಗ್ರಹಿಸಿ ಇಡಬಹುದಾದ ಡಿಜಿಟಲ್ ಲಾಕರ್ ಸಿಸ್ಟಂ ಜು. ೦೧ ರಿಂದ ಜಾರಿಗೆ ಬರಲಿದೆ.ಇದಕ್ಕಾಗಿ ಡಿಜಿಟಲ್ ಇಂಡಿಯಾ ಸಪ್ತಾಹವನ್ನು ಜು. ೦೧ ರಿಂದ ೦೭ ರವರೆಗೆ ಆಚರಿಸಲಾಗುತ್ತಿದೆ. ಭಾರತ ಸರ್ಕಾರದ ಪ್ರಧಾನಮಂತ್ರಿಗಳು ಜು.೦೧ ರಂದು ಇದರ ಉದ್ಘಾಟನೆ ನೆರವೇರಿಸಲಿದ್ದು, ಕಾರ್ಯಕ್ರಮದ ನೇರಪ್ರಸಾರವನ್ನು ಎನ್.ಐ.ಸಿ ಸಹಯೋಗದೊಂದಿಗೆ ಜು.೦೧ ರಂದು ಸಂಜೆ ೦೪ ಗಂಟೆಗೆ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಏರ್ಪಡಿಸಲಾಗಿದೆ.ಡಿಜಿಟಲ್ ಲಾಕರ್ ಸಿಸ್ಟಂ ಭಾರತ ಸರ್ಕಾರದ ಯೋಜನೆಯಾಗಿದ್ದು, ಇದನ್ನು ಎಲ್ಲಾ ಅಧಿಕಾರಿಗಳು ಹಾಗೂ ನೌಕರರು ಹೊಂದುವ ಸಲುವಾಗಿ ಪ್ರಧಾನ ಮಂತ್ರಿಗಳು ಈ ಯೋಜನೆಯನ್ನು ಜು.೦೧ ರಂದು ಜಾರಿಗೆ ತರಲಿದ್ದಾರೆ. ಜುಲೈ.೦೧ ರಿಂದ ೦೭ ರವರೆಗೆ ಡಿಜಿಟಲ್ ಇಂಡಿಯಾ ಸಪ್ತಾಹ (ವೀಕ್) ಆಚರಿಸಲಾಗುತ್ತಿದೆ. ಈ ಯೋಜನೆಯಡಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ತಮ್ಮ ವೈಯಕ್ತಿಕ ದಾಖಲೆಗಳು ಹಾಗೂ ಪ್ರಮಾಣ ಪತ್ರಗಳು ಮತ್ತು ಇನ್ನಿತರೆ ಅಮೂಲ್ಯ ದಾಖಲೆಗಳನ್ನು ಗಣಕೀಕೃತ ವ್ಯವಸ್ಥೆಯಲ್ಲಿ ಡಿಜಿಟಲ್ ಲಾಕರ್‌ನಲ್ಲಿ ಸಂಗ್ರಹಿಸಿಡಬಹುದಾಗಿದೆ. ಅಲ್ಲದೇ ಡಿಜಿಟಲ್ ಲಾಕರ್ ಹೊಂದಿದವರಿಗೆ ಯೂಸರ್ ನೇಮ್ ಮತ್ತು ಪಾಸ್‌ವರ್ಡ್ ನೀಡಲಾಗುವುದು. ಯಾವುದೇ ಸರ್ಕಾರಿ ಕೆಲಸಕ್ಕಾಗಿ ಅವಶ್ಯವಿರುವ ದಾಖಲೆಗಳನ್ನು ನೀಡುವಾಗ ಕೇವಲ ಪಾಸ್ ಕೋಡ್ ಮಾತ್ರ ನೀಡಬಹುದಾಗಿದೆ. ಉದ್ಘಾಟನಾ ಕಾರ್ಯಕ್ರಮದ ನೇರಪ್ರಸಾರವನ್ನು ಎನ್.ಐ.ಸಿ ಸಹಯೋಗದೊಂದಿಗೆ ಜು.೦೧ ರಂದು ಸಂಜೆ ೦೪ ಗಂಟೆಗೆ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಏರ್ಪಡಿಸಲಾಗಿದ್ದು, ಎಲ್ಲ ಇಲಾಖಾ ಅಧಿಕಾರಿ, ಸಿಬ್ಬಂದಿಗಳು ತಪ್ಪದೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ತಿಳಿಸಿದ್ದಾರೆ.
Subscribe to:
Post Comments (Atom)
0 comments:
Post a Comment