ಕೊಪ್ಪಳ, ಜು.೩೦ ಸ್ಟೇಟ್ ಬ್ಯಾಂಕ್ ಆಫ್ ಹೈದ್ರಾಬಾದ್ ಮತ್ತು ಗ್ರಾಮೀಣ ಸ್ವಯಂ ಉದ್ಯೋಗ ಸಂಸ್ಥೆ ವತಿಯಿಂದ ಕೊಪ್ಪಳ ಜಿಲ್ಲೆಯ ಯುವಕ, ಯುವತಿಯರಿಗೆ ೦೬ ದಿನಗಳ ಉಚಿತ ಹೈನುಗಾರಿಕೆ ತರಬೇತಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲಿಚ್ಛಿಸುವವರು ೧೮ ರಿಂದ ೪೦ ವರ್ಷದೊಳಗಿನ ವಯೋಮಿತಿ ಹೊಂದಿರಬೇಕು. ಕನಿಷ್ಠ ೫ನೇ ತರಗತಿ ಉತ್ತೀರ್ಣರಾಗಿರಬೇಕು. ಕೊಪ್ಪಳ ಜಿಲ್ಲೆಗೆ ಸೇರಿದವರಾಗಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ಅನುಭವ ಇದ್ದವರಿಗೆ ಆದ್ಯತೆ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗವುದು. ಆಗಸ್ಟ್.೧೩ ಅರ್ಜಿ ವಿತರಿಸುವ ಹಾಗೂ ಸ್ವೀಕರಿಸುವ ಕೊನೆ ದಿನಾಂಕವಾಗಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಹೈದ್ರಾಬಾದ್, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ವೃತ್ತದ ಆವರಣ, ಕೊಪ್ಪಳ, ದೂರವಾಣಿ ಸಂಖ್ಯೆ : ೦೮೫೩೯-೨೩೧೦೩೮ ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಆಗಸ್ಟ್.೧೪ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಸಂಸ್ಥೆಯಲ್ಲಿ ಸಂದರ್ಶನ ನಡೆಯಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಆಗಸ್ಟ್.೧೭ ರಿಂದ ತರಬೇತಿ ತರಗತಿಗಳು ಪ್ರಾರಂಭವಾಗಲಿವೆ ಎಂದು ಸಂಸ್ಥೆ ನಿರ್ದೇಶಕರು ತಿಳಿಸಿದ್ದಾರೆ.
ಕೆ.ಡಿ.ಪಿ ಸಭೆ ಮುಂದೂಡಿಕೆ
ಕೊಪ್ಪಳ, ಜು.೩೦ ಜಿಲ್ಲಾ ಪಂಚಾಯತ್‌ನ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಜು.೩೧ ರಂದು ಏರ್ಪಡಿಸಲಾಗಿದ್ದ ಜಿಲ್ಲಾ ಪಂಚಾಯತ್‌ನ ಕೆ.ಡಿ.ಪಿ ಸಭೆಯನ್ನು ಆಗಸ್ಟ್.೦೪ ಕ್ಕೆ ಮುಂದೂಡಲಾಗಿದೆ.
ಜಿಲ್ಲಾ ಪಂಚಾಯತ್‌ನ ೧ನೇ ತ್ರೈಮಾಸಿಕ ಕೆ.ಡಿ.ಪಿ ಸಭೆಯನ್ನು ಸಣ್ಣ ನೀರಾವರಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಅಧ್ಯಕ್ಷತೆಯಲ್ಲಿ ಜು.೩೧ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಜಿಲ್ಲಾ ಪಂಚಾಯತ್‌ನ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ಆದರೆ, ಅನಿವಾರ್ಯ ಕಾರಣಗಳಿಂದಾಗಿ ಸಭೆಯನ್ನು ಮುಂದೂಡಲಾಗಿದ್ದು, ಆಗಸ್ಟ್.೦೪ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ತಿಳಿಸಿದ್ದಾರೆ.

0 comments:
Post a Comment