ಕೊಪ್ಪಳ, ಜು.೦೯ ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಾರ್ತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಇವರುಗಳ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲಾ ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಜುಲೈ.೧೧ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಶಾರದಾ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ.
ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಅಧ್ಯಕ್ಷತೆ ವಹಿಸುವರು. ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ್, ಶರಣಪ್ಪ ಮಟ್ಟೂರ್, ಅಮರನಾಥ ಪಾಟೀಲ್, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಲ್ಲಿಕಾರ್ಜುನ ನಾಗಪ್ಪ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ಶಿಕ್ಷಣ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ವಿರೇಶಪ್ಪ ಸಾಲೋಣಿ, ನಗರಸಭೆ ಅಧ್ಯಕ್ಷೆ ಬಸಮ್ಮ ಹಳ್ಳಿಗುಡಿ, ತಾಲೂಕಾ ಪಂಚಾಯತ್ ಅಧ್ಯಕ್ಷೆ ಬಾನು ಚಾಂದ್‌ಸಾಬ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೈಯ್ಯದ್ ಜುಲ್ಲು ಖಾದರ್ ಖಾದ್ರಿ ಅವರು ಪಾಲ್ಗೊಳ್ಳುವರು.
ಗೌರಮ್ಮ ಪತ್ತಾರ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಅಂದು ಬೆಳಿಗ್ಗೆ ೮.೩೦ ಗಂಟೆಗೆ ವಿಶ್ವ ಜನಸಂಖ್ಯಾ ದಿನಾಚರಣೆಯ ಜನಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದ್ದು, ಜಾಥಾವು ಶಾರದಾ ಪದವಿ ಪೂರ್ವ ಕಾಲೇಜಿನ ಆವರಣದಿಂದ ಪ್ರಾರಂಭಗೊಂಡು, ಬಸ್‌ಸ್ಟ್ಯಾಂಡ್, ಅಶೋಕ ವೃತ್ತ, ಜವಾಹರ ರಸ್ತೆ, ಆಝಾದ್ ವೃತ್ತದ ಮೂಲಕ ಶಾರದಾ ಕಾಲೇಜಿನ ಆವರಣದಲ್ಲಿ ಸಮಾರೋಪಗೊಳ್ಳಲಿದೆ.

0 comments:
Post a Comment