PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಜು.೦೯ ಬಾಗಲಕೋಟೆಯ ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರದ ವತಿಯಿಂದ ಹಣ್ಣು ಬೆಳೆಗಳ ಬಗ್ಗೆ ಮೂರು ದಿನಗಳ ಉಚಿತ ತರಬೇತಿ ಶಿಬಿರವನ್ನು ಇದೇ ಜುಲೈ ತಿಂಗಳಿನಲ್ಲಿ ಏರ್ಪಡಿಸಲಾಗಿದೆ. ಹಣ್ಣು ಬೆಳೆಗಳ ಅಧಿಕ ಇಳುವರಿಗೆ ಅನುಸರಿಸಬೇಕಾದ ಆಧುನಿಕ ಬೇಸಾಯ ಕ್ರಮಗಳು, ಸಾವಯವ ಕೃಷಿ ತಂತ್ರಜ್ಞಾನ, ಸೂಕ್ತ ನೀರಾವರಿ ಪದ್ಧತಿಗಳು, ಸಂಸ್ಕರಣಾ ಕ್ರಮಗಳು, ಹಣಕಾಸಿನ ನಿರ್ವಹಣೆ ಇತ್ಯಾದಿ ವಿಷಯಗಳ ಕುರಿತು ಶಿಬಿರದಲ್ಲಿ ತರಬೇತಿ ನೀಡಲಾಗುವುದು. ತರಬೇತಿಯಲ್ಲಿ ಭಾಗವಹಿಸುವ ಶಿಬಿರಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಭಾಗವಹಿಸಲಿಚ್ಛಿಸುವವರು ತಮ್ಮ ಹೆಸರು, ವಿಳಾಸ, ದೂರವಾಣಿ ಅಥವಾ ಮೊಬೈಲ್ ಸಂಖ್ಯೆ ಇತ್ಯಾದಿ ವಿವರಗಳನ್ನು ಜುಲೈ.೧೭ ರೊಳಗಾಗಿ ಕೇಂದ್ರದಲ್ಲಿ ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ಕೃಷಿಕರ ಸಂಪನ್ಮೂಲ ಕೇಂದ್ರ, ಬಿ.ವಿ.ವಿ ಸಂಘದ ಸ್ಪಿನ್ನಿಂಗ್ ಮಿಲ್ ಆವರಣ, ಗದ್ದನಕೇರಿ ರೋಡ್, ಬಾಗಲಕೋm -೫೮೭೧೦೩. ಮೊ: ೯೪೮೨೬೩೦೭೯೦ ನ್ನು ಸಂಪರ್ಕಿಸಬಹುದು.

Advertisement

0 comments:

Post a Comment

 
Top