PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಜು.- ೩೧ ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆಯಾಗಿದ್ದು, ಬರ ಪರಿಸ್ಥಿತಿ ಉಂಟಾಗುವ ಸಾದ್ಯತೆಗಳಿವೆ.  ಬೆಳೆ ಸಾಲ ಹಾಗೂ ಕೃಷಿ ಚಟುವಟಿಕೆಗಳಿಗೆ ರೈತರು ಪಡೆದಿರುವ ಸಾಲವನ್ನು ಸೆಪ್ಟಂಬರ್ ಅಂತ್ಯದವರೆಗೆ ವಸೂಲಿ ಮಾಡುವುದಾಗಲಿ, ಆಸ್ತಿ ಜಪ್ತಿ ಮಾಡುವುದಾಗಲಿ ಅಥವಾ ಮುಟ್ಟುಗೋಲು ಹಾಕಿಕೊಳ್ಳುವುದಾಗಲಿ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
     ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು, ಮಳೆ, ಬೆಳೆ ಹಾಗೂ ಸ್ಥಿತಿ-ಗತಿಗಳ ಬಗ್ಗೆ ಪರಾಮರ್ಶೆ ನಡೆಸಲು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
     ಜಿಲ್ಲೆಯಲ್ಲಿ ಕಳೆದ ಮೇ ಹಾಗೂ ಜುಲೈ ತಿಂಗಳಿನಲ್ಲಿ ಒಟ್ಟು ೧೮೨. ೪೦
     ಜಿಲ್ಲೆಯಲ್ಲಿ ಮಳೆಯ ಕೊರತೆ ಉಂಟಾಗಿರುವುದರಿಂ, ಗ್ರಾಮೀಣ ಪ್ರದೇಶಗಳ ಜಾನುವಾರು, ಪ್ರಾಣಿ, ಪಕ್ಷಿಗಳಿಗೆ ಅವಶ್ಯಕತೆಗೆ ತಕ್ಕಂತೆ ಕುಡಿಯುವ ನೀರಿನ ತೊಟ್ಟಿಗಳನ್ನು ನಿರ್ಮಾಣ ಮಾಡುವುದು, ಅಥವಾ ಈಗಾಗಲೆ ಇರುವಂತಹ ತೊಟ್ಟಿಗಳು ಕೆಟ್ಟಿದ್ದಲ್ಲಿ, ಅಂತಹವುಗಳನ್ನು ದುರಸ್ತಿಗೊಳಿಸಿ, ಸುಸ್ಥಿತಿಯಲ್ಲಿ ಇಟ್ಟು, ಕುಡಿಯುವ ನೀರಿನ ಪೂರೈಕೆಗೆ ಕ್ರಮ ಕೈಗೊಳ್ಳಬೇಕು.  ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯತಿ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
     ಮುಂಗಾರು ಮಳೆಯ ಕೊರತೆ ಉಂಟಾಗಿರುವುದರಿಂದ, ಜಿಲ್ಲೆಯಲ್ಲಿನ ಮೇವು ಲಭ್ಯತೆಯ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಸಂಭವನೀಯ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಪಶುಸಂಗೊಪನಾ ಇಲಾಖೆ ಉಪನಿರ್ದೇಶಕ ಡಾ. ಭಾಸ್ಕರನಾಯಕ್ ಅವರಿಗೆ ಸೂಚನೆ ನೀಡಿದರು.
     ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್, ಉಪವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ್, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ರವೀಂದ್ರ, ಜಂಟಿಕೃಷಿ ನಿರ್ದೇಶಕ ರಾಮದಾಸ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಶಿಕಾಂತ್ ಕೋಟಿಮನಿ, ಎಲ್ಲ ತಾಲೂಕುಗಳ ತಹಸಿಲ್ದಾರರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.


ಮಿ.ಮೀ. ವಾಡಿಕೆ ಮಳೆಯ ಬದಲಿಗೆ ಕೇವಲ ೧೦೬. ೭೦ ಮಿ.ಮೀ. ಮಾತ್ರ ಮಳೆಯಾಗಿದೆ.  ಇದರಿಂದಾಗಿ ಶೇ. ೪೨ ರಷ್ಟು ಮಳೆಯ ಕೊರತೆ ಉಂಟಾಗಿದ್ದು, ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಉಂಟಾಗುವ ಸಾಧ್ಯತೆಗಳಿವೆ.  ರೈತರು ಕೃಷಿ ಚಟುವಟಿಕೆ ಕಾರ್ಯಗಳಿಗೆ ಹಾಗೂ ಬೆಳೆ ಸಾಲ ಪಡೆದಿರುವುದನ್ನು ಸೆಪ್ಟಂಬರ್ ಕೊನೆಯ ವಾರದವರೆಗೂ ವಸೂಲಿ ಮಾಡಬಾರದು.  ಅಲ್ಲದೆ ಬ್ಯಾಂಕ್‌ಗಳು, ಅಂತಹವರ ಆಸ್ತಿ ಜಪ್ತಿ ಮಾಡುವುದಾಗಲಿ ಅಥವಾ ಮುಟ್ಟು ಹಾಕಿಕೊಳ್ಳುವುದಾಗಲಿ ಮಾಡುವಂತಿಲ್ಲ.  ಈ ಕುರಿತು ಜಿಲ್ಲೆಯ ಎಲ್ಲ ಬ್ಯಾಂಕ್‌ಗಳಿಗೆ ಕೂಡಲೆ ಕಟ್ಟುನಿಟ್ಟಿನ ನಿರ್ದೇಶನ ನೀಡುವಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

Advertisement

0 comments:

Post a Comment

 
Top