PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಜು.೦೯  ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜು. ೧೧ ರಂದು ಕೊಪ್ಪಳದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಸಮಾರಂಭ ಜರುಗಲಿದ್ದು, ಜನಜಾಗೃತಿಗಾಗಿ ಜು. ೧೧ ರಿಂದ ೨೫ ರವರೆಗೆ ಜಾಗೃತಿ ಪಾಕ್ಷಿಕವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ್ ಬಾಸೂರ ಅವರು ತಿಳಿಸಿದ್ದಾರೆ.ಈ ಬಾರಿಯ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಕುಶಲ ಪರಿವಾರದ ಮಂತ್ರ, ೨ ಮಕ್ಕಳ ನಡುವೆ ಮೂರು ವರ್ಷಗಳ ಅಂತರ ಎಂಬ ಘೋಷವಾಕ್ಯ ನೀಡಲಾಗಿದೆ.  ಜು. ೧೧ ರಿಂದ ೨೫ ರವರೆಗೆ ಜಾಗೃತಿ ಪಾಕ್ಷಿಕವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.  ಜು. ೧೧ ರಂದು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಜನಜಾಗೃತಿ ಸಮಾರಂಭ ಹಾಗೂ ಅರಿವು ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.  ೨೦೧೫ ರ ವಿಶ್ವ ಜನಸಂಖ್ಯಾ ದಿನಾಚರಣೆಯ ಎಲ್ಲ ಕಾರ್ಯಕ್ರಮಗಳಲ್ಲಿ ನೋ ಸ್ಕಾಲ್‌ಪೆಲ್ ವ್ಯಾಸೆಕ್ಟಮಿ, ಪುರುಷ ಸಹಭಾಗಿತ್ವ ಹಾಗೂ ಪ್ರಸವೋತ್ತರ ಕುಟುಂಬ ಕಲ್ಯಾಣ (ಪಿಪಿಐಯುಸಿಡಿ) ವಿಧಾನಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು.  ಕುಟುಂಬ ಯೋಜನಾ ಸೇವೆಗಳನ್ನು ಜಿಲ್ಲೆಯಾದ್ಯಂತ ಹೆಚ್ಚಿನ ಆದ್ಯತೆ ಮೇಲೆ ಒದಗಿಸಲು ಅಗತ್ಯ ವ್ಯವಸ್ಥೆ ಕೈಗೊಳ್ಳಲಾಗಿದೆ.  ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ್ ಬಾಸೂರ ತಿಳಿಸಿದ್ದಾರೆ.

Advertisement

0 comments:

Post a Comment

 
Top