PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಜು.೩೧ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ೨೦೧೪-೧೫ನೇ ಸಾಲಿನ ಬ್ಲಾಕ್‌ವಾರು ಎಸ್.ಎಸ್.ಎಲ್.ಸಿ ಫಲಿತಾಂಶದ ವಿಶ್ಲೇಷಣೆ ಕಾರ್ಯಾಗಾರವನ್ನು ಆಗಸ್ಟ್.೦೧ ರಂದು ಬೆಳಿಗ್ಗೆ ೦೯ ಗಂಟೆಗೆ ಕೊಪ್ಪಳ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿದೆ.ವಿಶ್ಲೇಷಣೆ ಕಾರ್ಯಾಗಾರವನ್ನು ಆಗಸ್ಟ್.೦೧ ರಂದು ಬೆಳಿಗ್ಗೆ ೦೯ ಗಂಟೆಗೆ ಕೊಪ್ಪಳ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ  ಏರ್ಪಡಿಸಲಾಗಿದ್ದು,   ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ, ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಕಾರ್ಯಾಗಾರದಲ್ಲಿ ಕಡ್ಡಾಯವಾಗಿ ಹಾಜರಾಗಬೇಕು. ಅಲ್ಲದೇ ಕಾರ್ಯಾಗಾರಕ್ಕೆ ಬರುವಾಗ ತಮ್ಮ ಶಾಲೆಯ ೨೦೧೫ ರ ಎಸ್.ಎಸ್.ಎಲ್.ಸಿ ಫಲಿತಾಂಶದ ವಿವರ ಹಾಗೂ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಉತ್ತಮಪಡಿಸಲು ಸಿದ್ಧಪಡಿಸಲಾದ ಕ್ರಿಯಾ ಯೋಜನೆಯನ್ನು ತಪ್ಪದೇ ತರಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಬೆಣಕನಾಳ ಗ್ರಾಮದಲ್ಲಿ ರೋಜಗಾರ ದಿವಸ್ ಆಚರಣೆ.
ಕೊಪ್ಪಳ, ಜು.೩೧  ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗಂಗಾವತಿ ತಾಲೂಕಿನ ಸುಳೇಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬೆಣಕನಾಳ ಗ್ರಾಮದಲ್ಲಿ ಜು.೩೦ ರಂದು ರೋಜಗಾರ್ ದಿವಸವನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಂಗಾವತಿ ತಾಲೂಕಾ ಐಇಸಿ ಸಂಯೋಜಕ ಕೃಷ್ಣ ನಾಯಕ ಮಾತನಾಡಿ, ಗ್ರಾಮೀಣ ಕುಟುಂಬಗಳಿಗೆ ಕನಿಷ್ಠ ೧೦೦ ದಿನಗಳ ಉದ್ಯೋಗ ನೀಡುವ ನಿಟ್ಟಿನಲ್ಲಿ ಜನರಿಂದ ಕೆಲಸಕ್ಕೆ ಬೇಡಿಕೆ ಪಡೆಯುವುದು ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ರೋಜಗಾರ್ ದಿವಸದ ಮುಖ್ಯ ಉದ್ದೇಶವಾಗಿದೆ. ಅಲ್ಲದೇ, ಯೋಜನೆಯ ಸೌಲಭ್ಯ ಅವಕಾಶ ಮತ್ತು ಅನುಷ್ಠಾನ ಕಾರ್ಯವಿಧಾನಗಳ ಬಗ್ಗೆ ಗ್ರಾಮೀಣ ಜನರಿಗೆ ಅರಿವು ಮೂಡಿಸುವ ಅಗತ್ಯತೆ ಇರುವ ಕಾರಣ ತಿಂಗಳಲ್ಲಿ ಒಂದು ಗುರುವಾರದಂದು ರೋಜಗಾರ ದಿವಸವನ್ನು ಗ್ರಾಮ ಪಂಚಾಯಿತಿಯ ವಾರ್ಡ್ ಮಟ್ಟದಲ್ಲಿ ಆಚರಿಸಲಾಗುವುದು ಎಂದು ಅವರು ತಿಳಿಸಿದರು. ಸುಳೇಕಲ್ ಗ್ರಾಮ ಪಂಚಾಯತ್‌ನ ಎಲ್ಲ ಸದಸ್ಯರು ಪಾಲ್ಗೊಂಡಿದ್ದರು.   ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸುಮಾರು ೧೬೦ ಕೂಲಿ ಕಾರ್ಮಿಕರಿಂದ ನಮೂನೆ-೦೬ ರ ಮೂಲಕ ಬೇಡಿಕೆಗಳನ್ನು ಪಡೆದು, ಅವರಿಗೆ ಅರಣ್ಯೀಕರಣ ಕೆಲಸವನ್ನು ನೀಡಲಾಯಿತು. ಅಲ್ಲದೇ, ಉದ್ಯೋಗ ಚೀಟಿ ಹೊಂದಿರದ ಕುಟುಂಬದವರು ನೋಂದಣಿಗಾಗಿ ಈ ಸಂದರ್ಭದಲ್ಲಿ ಅರ್ಜಿ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಾನಂದ ವಂಕಲಕುಂಟಿ, ಹನುಮಂತಪ್ಪ ಗುಬ್ಬಿ, ಸವಿತಾ ಮಲ್ಲಯ್ಯಸ್ವಾಮಿ ಹಾಗೂ ಅಭಿವೃದ್ಧಿ ಅಧಿಕಾರಿಗಳಾದ ವೀರಣ್ಣ ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ, ಕಾಯಕಬಂಧುಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.       
ಯುವ ಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹಧನ ಅರ್ಜಿ ಆಹ್ವಾನ.
ಕೊಪ್ಪಳ, ಜು.೩೧ ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ೨೦೧೪ನೇ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು ಪ್ರೋತ್ಸಾಹಧನ ನೀಡುವ  ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
     ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿಟಿಪಿ ಮಾಡಿಸಿದಾಗ ೧/೮ ಡೆಮ್ಮಿ ಅಳತೆಯಲ್ಲಿ ಕನಿಷ್ಠ ೬೦ ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು. ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ  ನೇರವಾಗಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ, ರಾಷ್ಟ್ರೀಯ ಭಾವೈಕ್ಯತೆಗೆ ದಕ್ಕೆ ತರುವಂತಹ ವಿಷಯ ಅಥವಾ ಸಂಗತಿಗಳು ಪ್ರಸ್ತಾಪವಾಗಿರಬಾರದು. ಅರ್ಜಿದಾರರು ೧೮ ರಿಂದ ೩೫ ವರ್ಷದೊಳಗಿನ ವಯೋಮಿತಿಯಲ್ಲಿರಬೇಕು. ವಯಸ್ಸಿನ ದಾಖಲಾತಿ ಬಗ್ಗೆ ಎಸ್.ಎಸ್.ಎಲ್.ಸಿ. ಅಥವಾ ಅಧಿಕೃತ ಜನ್ಮದಾಖಲಾತಿ ಪ್ರಮಾಣ ಪತ್ರದೊಂದಿಗೆ, ಇದುವರೆಗೂ ಎಲ್ಲಿಯೂ ಚೊಚ್ಚಲ ಕೃತಿ ಪ್ರಕಟವಾಗದೇ ಇರುವ ಬಗ್ಗೆ ಸ್ವಯಂ ದೃಢೀಕರಣ ಪತ್ರದೊಂದಿಗೆ ತಾವು ರಚಿಸಿರುವ ಚೊಚ್ಚಲ ಕೃತಿಯನ್ನು ಬೆರಳಚ್ಚು ಅಥವಾ ಡಿಟಿಪಿ ಮಾಡಿಸಿ ತಮ್ಮ ಸ್ವ-ವಿವರಗಳೊಂದಿಗೆ ಅರ್ಜಿಗಳನ್ನು ಆ.೨೨ ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-೫೬೦೦೦೨ ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು ದೂರವಾಣಿ ಸಂಖ್ಯೆ: ೦೮೦-೨೨೪೮೪೫೧೬, ೦೮೦-೨೨೦೧೭೭೦೪.

Advertisement

0 comments:

Post a Comment

 
Top