PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಜು.೨೭ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯು ಕೊಪ್ಪಳ ಜಿಲ್ಲೆಯ ಕುರಿ ಮತ್ತು ಮೇಕೆಗಳಿಗೆ ಪಿಪಿಆರ್ ಲಸಿಕಾ ಕಾರ್ಯಕ್ರಮವನ್ನು ಪ್ರಾರಂಭಿಸಿದೆ.
     ಪ್ರಸಕ್ತ ಸಾಲಿನ ಮೊದಲನೆ ಸುತ್ತಿನ ಪಿಪಿಆರ್ ಲಸಿಕಾ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದು, ಈ ಹಿಂದಿನ ಸುತ್ತಿನ ಲಸಿಕಾ ಕಾರ್ಯಕ್ರಮದಲ್ಲಿ ಬಿಟ್ಟುಹೋದ ಹಾಗೂ ನಂತರ ಹೊಸದಾಗಿ ಹುಟ್ಟಿದ (ಮೂರು ತಿಂಗಳಿಗೆ ಮೇಲ್ಪಟ್ಟು ಒಟ್ಟು ಸಂಖ್ಯೆಯ ಶೇ. ೩೦ ರಷ್ಟು) ಕುರಿ ಮತ್ತು ಮೇಕೆಗಳಿಗೆ ಪಿಪಿಆರ್ ಲಸಿಕೆ ನೀಡಲಾಗುವುದು.  ಲಸಿಕೆಯು ಸಮೀಪದ ಪಶು ವೈದ್ಯ ಸಂಸ್ಥೆಗಳಲ್ಲಿ ಲಭ್ಯವಿದ್ದು, ಕುರಿ ಮತ್ತು ಮೇಕೆ ಸಾಕಾಣಿಕೆದಾರರು ಈ ಲಸಿಕಾ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಬೇಕು ಎಮದು ಪಶುಪಾಲನಾ ಇಲಾಖೆ ಉಪನಿರ್ದೇಶಕ ಭಾಸ್ಕರನಾಯಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಪ್ಪಳ : ಹಂದಿಗಳನ್ನು ನಗರದಿಂದ ಹೊರಸಾಗಿಸಲು ಜು. ೩೧ ರ ಗಡುವು
ಕೊಪ್ಪಳ ಜು. ೨೭ (ಕರ್ನಾಟಕ ವಾರ್ತೆ): ಕೊಪ್ಪಳ ನಗರದಲ್ಲಿ ಹಂದಿಗಳ ಹಾವಳಿ ಹೆಚ್ಚಾಗಿದ್ದು, ಹಂದಿಗಳನ್ನು ನಗರದಿಂದ ಜು. ೩೧ ರೊಳಗಾಗಿ ಹೊರ ಸಾಗಿಸುವಂತೆ ನಗರಸಭೆ ಪೌರಾಯುಕ್ತ ರಮೇಶ್ ಪಟ್ಟೇದಾರ್ ಅವರು ಹಂದಿ ಸಾಕಾಣಿಕೆದಾರರಿಗೆ ಸೂಚನೆ ನೀಡಿದ್ದಾರೆ.
     ಕೊಪ್ಪಳ ನಗರದಲ್ಲಿ ಹಂದಿಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ.  ಈ ಹಿನ್ನೆಲೆಯಲ್ಲಿ ಕಳೆದ ಜು. ೨೪ ರಂದು ಕೊಪ್ಪಳದಲ್ಲಿ ಹಂದಿಗಳನ್ನು ಹಿಡಿದು ಸಾಗಿಸುವ ಕಾರ್ಯಾಚರಣೆ ಕೈಗೊಂಡ ಸಂದರ್ಭದಲ್ಲಿ ಏಳು ದಿನಗಳ ಒಳಗಾಗಿ ಹಂದಿಗಳನ್ನು ಹೊರಸಾಗಿಸುವುದಾಗಿ ಮುಚ್ಚಳಿಕೆ ಪತ್ರವನ್ನು ಹಂದಿ ಸಾಕಾಣಿಕೆದಾರರಿಂದ ಬರೆಯಿಸಿಕೊಂಡು, ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು.  ಕರ್ನಾಟಕ ಪುರಸಭೆಗಳ ಕಾಯ್ದೆ ೧೯೬೪ ಕಲಂ ೨೨೩ ರಂತೆ ಹಂದಿಗಳನ್ನು ನಾಶಪಡಿಸಲು ಅಥವಾ ವಿಲೇವಾರಿ ಮಾಡಲು ನಗರಸಭೆಗೆ ಸಂಪೂರ್ಣ ಅಧಿಕಾರವಿರುತ್ತದೆ.  ಅದರನ್ವಯ ಜು. ೩೧ ರ ಒಳಗಾಗಿ ಹಂದಿಗಳನ್ನು ನಗರದಿಂದ ಹೊರ ಸಾಗಿಸದಿದ್ದಲ್ಲಿ, ಕಾಯ್ದೆಯನ್ವಯ ಕ್ರಮ ಜರುಗಿಸಲಾಗುವುದು.  ಈ ರೀತಿಯಿಂದ ಉಂಟಾಗುವ ಯಾವುದೇ ನಷ್ಟ ಪರಿಹಾರಕ್ಕೆ ಸಂಬಂಧಿಸಿದವರು ಕ್ಲೇಮ್ ಮಾಡಲು ಅವಕಾಶವಿರುವುದಿಲ್ಲ.  ಹಂದಿಗಳ ಮಾಲೀಕರು ಕೂಡಲೆ ಹಂದಿಗಳನ್ನು ನಗರದಿಂದ ಹೊರ ಸಾಗಿಸಲು ಇದು ಕೊನೆಯ ಎಚ್ಚರಿಕೆ ಆಗಿರುತ್ತದೆ ಎಂದು ನಗರಸಭೆ ಪೌರಾಯುಕ್ತ ರಮೇಶ್ ಪಟ್ಟೇದಾರ್ ಅವರು ಎಚ್ಚರಿಕೆ ನೀಡಿದ್ದಾರೆ.

Advertisement

0 comments:

Post a Comment

 
Top