PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ,ಜು,೨೫: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಘಟಕದ ವತಿಯಿಂದ ಪತ್ರಿಕಾ ದಿನಾಚರಣೆಯನ್ನು ಜು.೨೬ ರ ರವಿವಾರ ಬೆಳಿಗ್ಗೆ ೧೦.೩೦ ಕ್ಕೆ ನಗರದ ತಹಶೀಲ್ದಾರ್ ಕಛೇರಿ ಕಟ್ಟಡದಲ್ಲಿರುವ ಸಂಘದ ಪತ್ರಿಕಾ ಭವನದಲ್ಲಿ ಏರ್ಪಡಿಸಲಾಗಿದೆ. ಪತ್ರಿಕಾ ದಿನಾಚರಣೆಯ ಉದ್ಘಾಟನೆಯನ್ನು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ನೆರವೇರಿಸಲಿದ್ದು, ಸಂಘದ ಜಿಲ್ಲಾಧ್ಯಕ್ಷ ಎಂ.ಸಾದಿಕ್ ಅಲಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷೆ ಶ್ರೀಮತಿ ಬಸಮ್ಮ ರಾಮಣ್ಣ ಹಳ್ಳಿಗುಡಿ, ಉಪಾಧ್ಯಕ್ಷ ಬಾಳಪ್ಪ ಬಾರಕೇರ, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂ, ನಾಗರಿಕರ ವೇದಿಕೆ ರಾಜ್ಯಾಧ್ಯಕ್ಷ ಮಹೇಶಬಾಬು ಸುರ್ವೆ, ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಹರೀಶ ಹೆಚ್.ಎಸ್. ಮತ್ತು ಸಂಘದ ಜಿಲ್ಲಾ ಗೌರವಾಧ್ಯಕ್ಷ ಜಿ.ಎಸ್.ಗೋನಾಳ ಪಾಲ್ಗೊಳ್ಳಲಿದ್ದಾರೆಂದು ಪ್ರಕಟಣೆಯಲ್ಲಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಎಂ.ದೊಡ್ಡಮನಿ ತಿಳಿಸಿ ಸರ್ವರನ್ನು ಸ್ವಾಗತಿಸಿದ್ದಾರೆ.

Advertisement

0 comments:

Post a Comment

 
Top