ಕೊಪ್ಪಳ, ಜು.೨೦ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜು.೨೧ ರಂದು ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ೨೦೧೪-೧೫ನೇ ಸಾಲಿನ ಬ್ಲಾಕ್‌ವಾರು ಎಸ್.ಎಸ್.ಎಲ್.ಸಿ ಫಲಿತಾಂಶದ ವಿಶ್ಲೇಷಣೆ ಕಾರ್ಯಾಗಾರವನ್ನು ಜು.೨೪ ಕ್ಕೆ ಮುಂದೂಡಲಾಗಿದೆ. ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ, ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಕಾರ್ಯಾಗಾರದಲ್ಲಿ ಕಡ್ಡಾಯವಾಗಿ ಹಾಜರಾಗಬೇಕು. ಅಲ್ಲದೇ ಕಾರ್ಯಾಗಾರಕ್ಕೆ ಬರುವಾಗ ತಮ್ಮ ಶಾಲೆಯ ೨೦೧೫ ರ ಎಸ್.ಎಸ್.ಎಲ್.ಸಿ ಫಲಿತಾಂಶದ ವಿವರ ಹಾಗೂ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಉತ್ತಮಪಡಿಸಲು ಸಿದ್ಧಪಡಿಸಲಾದ ಕ್ರಿಯಾ ಯೋಜನೆಯನ್ನು ತಪ್ಪದೇ ತರಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
Home
»
Koppal News
»
koppal organisations
»
news
» ಫಲಿತಾಂಶ ವಿಶ್ಲೇಷಣೆ ಕಾರ್ಯಾಗಾರ ಜು. ೨೪ ಕ್ಕೆ ಮುಂದೂಡಿಕೆ.
Subscribe to:
Post Comments (Atom)
0 comments:
Post a Comment