PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಜು.೧೦  ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ರಾಜ್ಯ ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಜು. ೧೧ ಮತ್ತು ೧೨ ರಂದು ಎರಡು ದಿನಗಳ ಕೊಪ್ಪಳ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.ಸಚಿವರು ಜು. ೧೧ ರಂದು ಬೆಳಿಗ್ಗೆ ೯-೩೦ ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ಹಿಟ್ನಾಳ್ ಬಳಿಯ ಟೋಲ್‌ಗೇಟ್ ವಿಷಯ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸುವರು.  ನಂತರ ಬೆ. ೧೧ ಗಂಟೆಗೆ ಕೊಪ್ಪಳದ ಶಾರದ ಪ.ಪೂ. ಕಾಲೇಜಿನಲ್ಲಿ ಆಯೋಜಿಸಲಾಗಿರುವ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.  ಸಚಿವರು ಮಧ್ಯಾಹ್ನ ೧ ಗಂಟೆಗೆ ಕಾರಟಗಿಗೆ ತೆರಳಿ, ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ, ವಾಸ್ತವ್ಯ ಮಾಡುವರು.  ಜು. ೧೨ ರಂದು ಬೆಳಿಗ್ಗೆ ಕಾರಟಗಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳ ವಿಚಾರಣೆ ನಡೆಸಿ, ಮಧ್ಯಾಹ್ನ ೨ ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

Advertisement

0 comments:

Post a Comment

 
Top