PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಆ.೨೧ (ಕ ವಾ): ಕೊಪ್ಪಳ ನಗರಸಭೆಯ ಶೇಕಡಾ ೨೪.೧೦ ಯೋಜನೆಯಡಿ ಪ್ರಸಕ್ತ ಸಾಲಿನ ಎಸ್.ಎಫ್.ಸಿ ನಿಧಿಯಲ್ಲಿ ಬಾಕಿ ಉಳಿದಿರುವ ಅನುದಾನದಡಿ ಶೌಚಾಲಯ ನಿರ್ಮಿಸಿಕೊಳ್ಳಲು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸಹಾಯಧನ ಒದಗಿಸಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
          ಯೋಜನೆಯಡಿ ನಗರಸಭೆ ವ್ಯಾಪ್ತಿಯ ಒಟ್ಟು ೧೧ ಜನ (ಪ.ಜಾ-೦೫ ಹಾಗೂ ಪ.ಪಂ-೦೬) ಫಲಾನುಭವಿಗಳಿಗೆ ಶೌಚಾಲಯ ನಿರ್ಮಿಸಿಕೊಳ್ಳಲು ಸಹಾಯಧನ ಒದಗಿಸಲು ಉದ್ದೇಶಿಸಲಾಗಿದೆ. ಆಸ್ತಿ ಯಾರ ಹೆಸರಿನಲ್ಲಿ ನೊಂದಣಿ ಇರುತ್ತದೆಯೋ ಅವರ ಹೆಸರಿನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಸ್ತಿ ತೆರಿಗೆ ಫಾರಂ ಮತ್ತು ನಮೂನೆ-೩, ಇತ್ತೀಚಿನ ೦೨ ಪಾಸ್‌ಪೋರ್ಟ್ ಸೈಜಿನ ಭಾವಚಿತ್ರ, ಚುನಾವಣಾ ಆಯೋಗದ ಗುರುತಿನ ಚೀಟಿ, ಆಧಾರ ಕಾರ್ಡ್, ಕುಟುಂಬದ ಪಡಿತರ ಚೀಟಿ ದಾಖಲೆಗಳನ್ನು ದ್ವಿಪ್ರತಿಯಲ್ಲಿ ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿ, ಲಗತ್ತಿಸಿ ಈ ಕಾರ್ಯಾಲಯಕ್ಕೆ  ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಆ.೩೧ ಕೊನೆ ದಿನಾಂಕವಾಗಿದ್ದು, ಅಪೂರ್ಣ ದಾಖಲಾತಿ ಲಗತ್ತಿಸಿದ ಹಾಗೂ ಅವಧಿ ಮೀರಿ ಬಂದಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ನಗರಸಭೆ ಪೌರಾಯುಕ್ತ ರಮೇಶ ಪಟ್ಟೇದ್ ತಿಳಿಸಿದ್ದಾರೆ.

ಕೌಶಲ್ಯ ಅಭಿವೃದ್ಧಿ ತರಬೇತಿ ಶಿಬಿರ : ಅರ್ಜಿ ಆಹ್ವಾನ
ಕೊಪ್ಪಳ, ಆ.೨೧ (ಕ ವಾ) ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಕೊಪ್ಪಳ ಜಿಲ್ಲೆಯ ರೈತರ ಮಕ್ಕಳಿಗೆ ಒಂದು ತಿಂಗಳ ಕೌಶಲ್ಯ ಅಭಿವೃದ್ಧಿ ತರಬೇತಿ ಶಿಬಿರವನ್ನು ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
           ಶಿಬಿರವು ತೋಟಗಾರಿಕೆ ವಿಶ್ವವಿದ್ಯಾಲಯ, ಬಾಗಲಕೋಟೆಯಲ್ಲಿ ಸೆಪ್ಟಂಬರ್.೦೧ ರಿಂದ ಸೆಪ್ಟಂಬರ್.೩೦ ರವರೆಗೆ ಒಂದು ತಿಂಗಳ ನಡೆಯಲಿದೆ. ಶಿಬಿರಾರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಅರ್ಜಿ ಸಲ್ಲಿಸಲಿಚ್ಛಿಸುವವರು ಕನಿಷ್ಠ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಕನ್ನಡ ಮಾಧ್ಯಮದಲ್ಲಿ ಪಾಸಾಗಿರಬೇಕು. ಸಾಮಾನ್ಯ ವರ್ಗದವರು ೧೮ ರಿಂದ ೩೩ ಹಾಗೂ ಪರಿಶಿಷ್ಟ ಜಾತಿ, ಪಂಗಡದವರು ೧೮ ರಿಂದ ೩೫ ವರ್ಷದೊಳಗಿನ ವಯೋಮಿತಿ ಹೊಂದಿರಬೇಕು. ನಿಗದಿತ ಅರ್ಜಿ ನಮೂನೆಗಳನ್ನು ತೋಟಗಾರಿಕೆ ಉಪನಿರ್ದೇಶಕರು, ಕೊಪ್ಪಳ ಇವರ ಕಛೇರಿಯಲ್ಲಿ ಆ.೨೫ ರೊಳಗಾಗಿ ಉಚಿತವಾಗಿ ಪಡೆಯಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಯನ್ನು ಆ.೨೬ ರೊಳಗಾಗಿ ಸಲ್ಲಿಸಬಹುದಾಗಿದೆ.
           ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ಮೂಲ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಜಮೀನು ಹೊಂದಿರುವ ಬಗ್ಗೆ ಪಹಣಿ ಮತ್ತು ಗ್ರಾಮ ಲೆಕ್ಕಾಧಿಕಾರಿಗಳಿಂದ ದೃಢೀಕರಿಸಿದ ವಂಶವೃಕ್ಷ ದಾಖಲಾತಿಗಳೊಂದಿಗೆ ಆ.೨೭ ರಂದು ಬೆಳಿಗ್ಗೆ ೧೧ ಗಂಟೆಗೆ ತೋಟಗಾರಿಕೆ ಉಪನಿರ್ದೇಶಕರು, ಕೊಪ್ಪಳ ಇವರ ಕಛೇರಿಯಲ್ಲಿ ಏರ್ಪಡಿಸಲಾಗಿರುವ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

Advertisement

0 comments:

Post a Comment

 
Top