PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಆ. ೧೨ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ಸಹಯೋಗದಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ ಪರೀಕ್ಷೆ) ತೆಗೆದುಕೊಂಡಿರುವ ಅಭ್ಯರ್ಥಿಗಳಿಗೆ ತರಬೇತಿ ಆಯೋಜಿಸಲಾಗಿದ್ದು, ನೋಂದಣಿ ಅವಧಿಯನ್ನು ಆ. ೨೦ ರವರೆಗೆ ವಿಸ್ತರಿಸಲಾಗಿದೆ.
     ಟಿಇಟಿ ಪರೀಕ್ಷೆಗೆ ಹಾಜರಾಗುವ ಹೈದ್ರಾಬಾದ್ ಕರ್ನಾಟಕ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ ಅಭ್ಯರ್ಥಿಗಳಿಗೆ ತರಬೇತಿಯನ್ನು ಆಯೋಜಿಸಲಾಗಿದ್ದು, ಅರ್ಜಿ ಸಲ್ಲಿಸಲು ಆ. ೧೨ ಕೊನೆಯ ದಿನಾಂಕವನ್ನಾಗಿ ನಿಗದಿಪಡಿಸಲಾಗಿತ್ತು.  ಹೆಚ್ಚಿನ ಅಭ್ಯರ್ಥಿಗಳು ಯೋಜನೆಯ ಸದುಪಯೋಗ ಪಡೆಯುವಂತಾಗಲಿ ಎನ್ನುವ ಸದುದ್ದೇಶದಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಆ. ೨೦ ರವರೆಗೆ ವಿಸ್ತರಿಸಲಾಗಿದೆ.   ತರಬೇತಿಯು ಆಯಾ ತಾಲೂಕಿನಲ್ಲಿ ಆ. ೧೭ ರಿಂದಲೇ ಪ್ರಾರಂಭವಾಗಲಿದ್ದು, ಉಳಿದಂತೆ ಯಾವುದೇ ಬದಲಾವಣೆ ಇರುವುದಿಲ್ಲ.  ಹೆಚ್ಚಿನ ವಿವರಗಳಿಗೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಥವಾ ಕ್ಷೇತ್ರ ಸಮನ್ವಯಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಕಲಬುರಗಿಯ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿ ಅಮ್ಲನ್ ಆದಿತ್ಯ ಬಿಸ್ವಾಸ್ ಅವರು ತಿಳಿಸಿದ್ದಾರೆ.

Advertisement

0 comments:

Post a Comment

 
Top