PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಆ.೧೪ (ಕ ವಾ): ಹೈದ್ರಾಬಾದ್ ಕರ್ನಾಟಕ ಪ್ರದೇಶದ ಸ್ಥಳಿಯ ಅಭ್ಯರ್ಥಿಗಳಿಗಾಗಿ ಪ್ರಸಕ್ತ ಸಾಲಿನ ಕೊಪ್ಪಳ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ೪೮ ನಾಗರೀಕ ಪೊಲೀಸ್ ಕಾನ್ಸ್‌ಟೇಬಲ್ ಹಾಗೂ ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ ಆ. ೧೭ ರಿಂದ ೨೨ ರವರೆಗೆ ಕೊಪ್ಪಳದಲ್ಲಿ ನಡೆಯಲಿದೆ.
     ಅಭ್ಯರ್ಥಿಗಳಿಗೆ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಯು ಕೊಪ್ಪಳ ನಗರದ ಗದಗ ರಸ್ತೆಯಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಆ.೧೭ ರಿಂದ ಆ.೨೨ ರವರೆಗೆ ಬೆಳಿಗ್ಗೆ ೭.೩೦ ಗಂಟೆಯಿಂದ ನಡೆಯಲಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಕರೆ ಪತ್ರಗಳನ್ನು ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್
www.ksp.gov.in ನಿಂದ ಪಡೆಯಬಹುದಾಗಿದೆ. ಕರೆ ಪತ್ರವನ್ನು ಪಡೆಯದೇ ಪರೀಕ್ಷೆಗೆ ಹಾಜರಾದಲ್ಲಿ ಅಂತಹವರಿಗೆ ದೈಹಿಕ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದಿಲ್ಲ. ದೈಹಿಕ ಪರೀಕ್ಷೆಗೆ ಬರುವಾಗ ಕರೆ ಪತ್ರದ ಜೊತೆಗೆ ಕರೆ ಪತ್ರದಲ್ಲಿ ನಮೂದಿಸಿದ ಎಲ್ಲಾ ದಾಖಲಾತಿ ಹಾಗೂ ಆನ್‌ಲೈನ್ ಮುಖಾಂತರ ಸಲ್ಲಿಸಿದ ಝರಾಕ್ಸ್ ಪ್ರತಿ, ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಅಲ್ಲದೇ ಅಭ್ಯರ್ಥಿಗಳು ವಿದ್ಯಾರ್ಹತೆಗೆ ಹಾಗೂ ಮೀಸಲಾತಿಗೆ ಸಂಬಂಧಿಸಿದಂತೆ ಜು.೨೮ ರೊಳಗೆ ಪಡೆದ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ದೃಢೀಕೃತ ಝರಾಕ್ಸ್ ಪ್ರತಿಗಳ ಒಂದು ಸೆಟ್ ತರಬೇಕು ಎಂದು ನೇಮಕಾತಿ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾ ಪೊಲೀಸ್ ಅಧೀಕ್ಷರು ತಿಳಿಸಿದ್ದಾರೆ. 

Advertisement

0 comments:

Post a Comment

 
Top