PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಆ. ೨೮ (ಕ ವಾ) ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ತಲೆದೋರಿರುವ ಬರ ಪರಿಸ್ಥಿತಿಯಿಂದ ಹಾನಿಯಾಗಿರುವ ಕೃಷಿ ಮತ್ತು ತೋಟಗಾರಿಕೆ ಬೆಳೆ ಕುರಿತು ಸಮೀಕ್ಷಾ ವರದಿಯನ್ನು ಶೀಘ್ರ ಸಲ್ಲಿಸುವಂತೆ ಜಿಲ್ಲಾಧಿಕಾರಿ ರಮಣದೀಪ್ ಚೌದರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
         ಬರ ಪರಿಸ್ಥಿತಿ ನಿರ್ವಹಣೆ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
         ಜಿಲ್ಲೆಯಲ್ಲಿ ಮುಂಗಾರು ಮಳೆ ಈ ಬಾರಿ ವಿಫಲವಾಗಿದ್ದು, ಬರ ಪರಿಸ್ಥಿತಿ ತಲೆದೋರಿದೆ.  ರೈತರು ಮಳೆಯ ನಿರೀಕ್ಷೆಯಲ್ಲಿ ಬಿತ್ತಿದ ಬೆಳೆಗಳು ಮಳೆಯ ಕೊರತೆಯಿಂದಾಗಿ ಒಣಗಿಹೋಗಿದ್ದು, ಕೃಷಿ ಮತ್ತು ತೋಟ
ಗಾರಿಕೆ ಬೆಳೆಗಳು ಹಾನಿಗೀಡಾಗಿವೆ.  ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಈಗಾಗಲೆ ಸರ್ಕಾರ ಘೋಷಿಸಿದೆ.  ಜಿಲ್ಲೆಯಲ್ಲಿನ ಕೃಷಿ ಮತ್ತು ತೋಟಗಾರಿಕೆ ಬೆಳೆ ಹಾನಿ ಕುರಿತಂತೆ ಕ್ಷೇತ್ರಗಳಿಗೆ ಅಧಿಕಾರಿಗಳು ಭೇಟಿ ನೀಡಿ, ಹಾನಿಯ ಸಮೀಕ್ಷೆ ನಡೆಸಿ, ವರದಿ ಸಲ್ಲಿಸಲು ನೀಡಿದ ಸೂಚನೆಯಂತೆ, ಸಮೀಕ್ಷಾ ಕಾರ್ಯ ಪ್ರಾರಂಭಗೊಂಡಿದೆ.  ಎಲ್ಲ ಹೋಬಳಿಗಳಿಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಲಾಗಿದ್ದು, ಆಯಾ ಅಧಿಕಾರಿಗಳು, ಸಂಬಂಧಿಸಿದ ಹೋಬಳಿಗಳಿಗೆ ಖುದ್ದು ಭೇಟಿ ನೀಡಿ, ಸಮೀಕ್ಷೆಯ ಬಗ್ಗೆ ಮಾಹಿತಿ ಸಂಗ್ರಹಿಸಬೇಕು.  ನಿಖರವಾದ ಸಮೀಕ್ಷಾ ವರದಿಯನ್ನು ಆದಷ್ಟು ಶೀಘ್ರ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ರಮಣದೀಪ್ ಚೌದರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

0 comments:

Post a Comment

 
Top