PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಆ.೧೨ ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ ವತಿಯಿಂದ ಯಕ್ಷಗಾನ(ತೆಂಕು, ಬಡಗು ಮತ್ತು ಘಟ್ಟದಕೋರೆ), ಮೂಡಲಪಾಯ ಯಕ್ಷಗಾನ, ಗೊಂಬೆಯಾಟ(ಸೂತ್ರದ ಮತ್ತು ತೊಗಲು ಗೊಂಬೆ), ಶ್ರೀಕೃಷ್ಣ ಪಾರಿಜಾತ, ಸಣ್ಣಾಟ, ದೊಡ್ಡಾಟ ಇತ್ಯಾದಿ ಕಲಾಪ್ರಕಾರಗಳಿಗೆ ಸಂಬಂಧಿಸಿದಂತೆ ೨೦೧೪ ರಲ್ಲಿ ಪ್ರಕಟಿಸಿರುವ ಪುಸ್ತಕಗಳನ್ನು ಪುಸ್ತಕ  ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ ಅರ್ಜಿ ಆಹ್ವಾನಿಸಲಾಗಿದೆ.
     ಯಕ್ಷಗಾನ ಮತ್ತು ಬಯಲಾಟದ ವಿವಿಧ ಆಯಾಮಗಳ ಬಗ್ಗೆ (ಸಂಗೀತ, ಆಹಾರ್‍ಯ, ಅಭಿನಯ ಇತ್ಯಾದಿ), ಸಂಶೋಧನೆ, ವಿಮರ್ಶೆ, ಜೀವನಚರಿತ್ರೆ, ಪ್ರಸಂಗ ಪುಸ್ತಕ ಇತ್ಯಾದಿ ಪ್ರಕಾರಗಳನ್ನು ಒಳಗೊಂಡ ಪುಸ್ತಕಗಳನ್ನು ಬಹುಮಾನಕ್ಕಾಗಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಪುಸ್ತಕಕ್ಕೆ ೫,೦೦೦ ರೂ.ಗಳ ಬಹುಮಾನ ನೀಡಲಾಗುವುದು. ಪುಸ್ತಕ ಬಹುಮಾನಕ್ಕಾಗಿ ಸಲ್ಲಿಸುವ ಪುಸ್ತಕಗಳನ್ನು ಪಠ್ಯಕ್ಕಾಗಿ ಸಿದ್ಧಪಡಿಸಿರಬಾರದು. ಸಂಪಾದಿತ, ಅಭಿನಂದನಾ ಕೃತಿಯಾಗಿರಬಾರದು, ಕೃತಿಯು ಸ್ವರಚಿತವಾಗಿರಬೇಕು ಮತ್ತು ಪ್ರಥಮ ಮುದ್ರಣ ಆವೃತ್ತಿಯಾಗಿರಬೇಕು.
     ಆಸಕ್ತರು ಪುಸ್ತಕದ ನಾಲ್ಕು ಪ್ರತಿಗಳೊಂದಿಗೆ ಅರ್ಜಿಯನ್ನು ರಿಜಿಸ್ಟ್ರಾರ್, ಕರ್ನಾಟಕ ಯಕ್ಷಗಾನ ಬಯಲಾಟ ಅಕಾಡೆಮಿ, ಕನ್ನಡ ಭವನ, ಎರಡನೇ ಮಹಡಿ, ಚಾಲುಕ್ಯ ವಿಭಾಗ, ಜೆ.ಸಿ.ರಸ್ತೆ, ಬೆಂಗಳೂರು-೫೬೦ ೦೦೨, ದೂರವಾಣಿ ಸಂಖ್ಯೆ: ೦೮೦-೨೨೧೧೩೧೪೬ ಇವರಿಗೆ ಆ.೩೦ ರೊಳಗಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಯನ್ನು ಆಯಾ   ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದಾಗಿದೆ ಎಂದು ತಿಳಿಸಿದೆ. 
ಒಳನಾಡು ಮೀನುಗಾರಿಕೆ ತರಬೇತಿ ಅರ್ಜಿ ಆಹ್ವಾನ.
ಕೊಪ್ಪಳ, ಆ.೧೨ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕ ಬಿ.ಆರ್.ಪ್ರಾಜೆಕ್ಟ್‌ನ ಮೀನುಗಾರಿಕೆ ತರಬೇತಿ ಕೇಂದ್ರದ ವತಿಯಿಂದ ಪುರುಷ ಅಭ್ಯರ್ಥಿಗಳಿಗೆ ಒಳನಾಡು ಮೀನುಗಾರಿಕೆ ತರಬೇತಿ ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
     ಮೀನು ಮರಿ ಉತ್ಪಾದನೆ, ಪಾಲನೆ, ಹಂಚಿಕೆ, ಮೀನು ಸಾಕಣೆ, ಬಲೆ ಹೆಣೆಯುವುದು, ದುರಸ್ತಿ ಮಾಡುವುದು, ಹರಿಗೋಲು ನಡೆಸುವುದು, ಮೀನು ಹಿಡಿಯುವುದು, ಅಲಂಕಾರಿಕ ಮೀನು ಉತ್ಪಾದನೆ, ಪಾಲನೆ, ಇತ್ತೀಚಿನ ಬೆಳೆವಣಿಗೆಗಳು ಮುಂತಾದ ವಿಷಯಗಳ ಕುರಿತು ತರಬೇತಿ ನೀಡಲಾಗುವುದು. ತರಬೇತಿಯು ೧ ತಿಂಗಳ ಅವಧಿಯದಾಗಿದ್ದು, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ೨,೦೦೦ ರೂ. ಶಿಷ್ಯವೇತನ ನೀಡಲಾಗುವುದು.   ತರಬೇತಿಯು ಸೆಪ್ಟಂಬರ್.೦೭ ರಿಂದ ಆರಂಭವಾಗಲಿದೆ.
     ಅರ್ಜಿ ಸಲ್ಲಿಸಲಿಚ್ಛಿಸುವವರು ಕೊಪ್ಪಳ, ಬೀದರ್, ಗುಲ್ಬರ್ಗಾ, ಯಾದಗಿರಿ, ಚಿತ್ರದುರ್ಗ, ರಾಯಚೂರು, ಧಾರವಾಡ, ಬಿಜಾಪುರ, ಬಳ್ಳಾರಿ, ಬೆಳಗಾವಿ, ಉತ್ತರ ಕನ್ನಡ, ಗದಗ,   ದಾವಣಗೆರೆ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಬಾಗಲಕೋಟೆ ಜಿಲ್ಲೆಗೆ ಸೇರಿದವರಾಗಿರಬೇಕು. ೧೮ ರಿಂದ ೪೦ ವರ್ಷದೊಳಗಿನ ವಯೋಮಿತಿಯಲ್ಲಿರಬೇಕು. ೧೦ ನೇ ತರಗತಿವರೆಗೆ (ಪಾಸ್, ಫೇಲ್) ಓದಿರಬೇಕು. ತರಬೇತಿ ಅವಧಿಯಲ್ಲಿ ಇಲಾಖೆಯು ಒದಗಿಸುವ ಉಚಿತ ವಸತಿ ಗೃಹದಲ್ಲಿ ಕಡ್ಡಾಯವಾಗಿ ತಂಗಬೇಕು. ಮೀನುಗಾರಿಕೆ ವೃತ್ತಿ ನಡೆಸುತ್ತಿರುವವರು, ಮೀನುಗಾರಿಕೆ ಸಹಕಾರ ಸಂಘದ ಸದಸ್ಯರು, ಇತರೆ ಸಂಘದ ಸದಸ್ಯರಿಗೆ ಆದ್ಯತೆ ನೀಡಲಾಗುವುದು. ಸಂದರ್ಶನದ ಮೂಲಕ ಅಭ್ಯರ್ಥಿಯ ಆಯ್ಕೆ ನಡೆಯಲಿದ್ದು, ಸಂದರ್ಶನಕ್ಕೆ ಅಭ್ಯರ್ಥಿಯು ಸ್ವಂತ ಖರ್ಚಿನಲ್ಲಿ ಹಾಜರಗಬೇಕು.
     ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದ ಮೀನುಗಾರಿಕೆ ಕಛೇರಿಗಳಲ್ಲಿ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ನಿಗದಿತ ದಾಖಲೆಗಳೊಂದಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು(ಶ್ರೇಣಿ-೦೧), ಮೀನುಗಾರಿಕೆ ತರಬೇತಿ ಕೇಂದ್ರ, ಬಿ.ಆರ್.ಪ್ರಾಜೆಕ್ಟ್, ಭದ್ರಾವತಿ ತಾಲೂಕು, ಶಿವಮೊಗ್ಗ ಜಿಲ್ಲೆ, ದೂರವಾಣಿ ಸಂಖ್ಯೆ: ೦೮೨೮೨-೨೫೬೨೫೨ ಇವರಿಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆ ಅರ್ಜಿ ಆಹ್ವಾನ.
ಕೊಪ್ಪಳ, ಆ.೧೨ ಕೊಪ್ಪಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆ (ಎನ್.ಟಿ.ಎಸ್.ಇ,/ಎನ್.ಎಮ್.ಎಮ್.ಎಸ್) ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
     ತಾಲೂಕಿನ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪ್ರಸ್ತುತ ೮ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಎನ್.ಎಮ್.ಎಮ್.ಎಸ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ ಹಾಗೂ ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ ೧೦ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಎನ್.ಟಿ.ಎಸ್.ಇ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಭರ್ತಿ ಮಾಡಿದ ಅರ್ಜಿಗಳನ್ನು ಆಯಾ ಶಾಲಾ ಮುಖ್ಯೋಪಾಧ್ಯಾಯರ ಮುಖಾಂತರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಕ್ಕೆ ಸೆಪ್ಟಂಬರ್.೦೭ ರೊಳಗಾಗಿ ಸಲ್ಲಿಸಬಹುದು. 
ಆ.೧೫ ರಂದು ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ.
ಕೊಪ್ಪಳ, ಆ.೧೨  ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ ಆ.೧೫ ರಂದು ಬೆಳಿಗ್ಗೆ ೦೯ ಗಂಟೆಗೆ ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
     ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್.ತಂಗಡಗಿ ಅವರು ಧ್ವಜಾರೋಹಣ ನೆರವೇರಿಸುವರು. ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷ ಅಮರೇಶ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಹಾಲಪ್ಪ ಆಚಾರ್, ಶರಣಪ್ಪ ಮಟ್ಟೂರ್, ಅಮರನಾಥ ಪಾಟೀಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜುಲ್ಲು ಖಾದರ ಖಾದ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ.ಅನಿಲ್‌ಕುಮಾರ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ವಿನಯಕುಮಾರ ಎಂ.ಮೇಲಿನಮನಿ, ನಗರಸಭೆ ಅಧ್ಯಕ್ಷೆ ಬಸಮ್ಮ ಹಳ್ಳಿಗುಡಿ, ತಾಲೂಕ ಪಂಚಾಯತ ಅಧ್ಯಕ್ಷೆ ಬಾನು ಚಾಂದಸಾಬ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
     ಧ್ವಜಾರೋಹಣಕ್ಕೂ ಮುನ್ನ ಅಂದು ಬೆಳಿಗ್ಗೆ ೦೮ ಗಂಟೆಗೆ ಜಿಲ್ಲಾಡಳಿತ ಭವನದಿಂದ ಅಶೋಕ ವೃತ್ತ, ಬಸ್ ನಿಲ್ದಾಣ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣದವರೆಗೆ ಸ್ಥಬ್ದ ಚಿತ್ರಗಳ ಮೆರವಣಿಗೆ ನಡೆಯಲಿದೆ. ಅದೇ ದಿನ ಸಂಜೆ ೦೬ ರಿಂದ ೦೯ ಗಂಟೆಯವರೆಗೆ ನಗರದ ಬಾಲಕಿಯರ ಪ.ಪೂ. ಕಾಲೇಜು ಆವರಣದಲ್ಲಿನ ಸಾರ್ವಜನಿಕ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ತಿಳಿಸಿದೆ.  

Advertisement

0 comments:

Post a Comment

 
Top