PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಆ.೧೦ ಮಳೆ ಅಭಾವದಿಂದಾಗಿ ಗುಳೆ ಹೊರಟಿರುವ ಕೊಪ್ಪಳ ಜಿಲ್ಲೆಯ ವಿವಿಧ ಗ್ರಾಮಗಳ ಜನತೆ ಗುಳೆ ಹೋಗದೆ, ತಮ್ಮ ಗ್ರಾಮದಲ್ಲಿಯೇ ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ಮಾಡಿ, ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ಮನವಿ ಮಾಡಿದ್ದಾರೆ.
     ಕೊಪ್ಪಳ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಸಕ್ತ ಸಾಲಿನ ಪ್ರಾರಂಭದಲ್ಲಿ ಮಳೆ ಅಭಾವ ಕಂಡು ಬಂದಿರುವುದರಿಂದ ಜಿಲ್ಲೆಯಲ್ಲಿ ಬರಗಾಲ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಗ್ರಾಮೀಣ ಭಾಗದ ಕೂಲಿಕಾರರು ಕೆಲಸ ಅರಸಿ ಬೇರೆ ರಾಜ್ಯ ಅಥವಾ ಜಿಲ್ಲೆಗಳಿಗೆ ಗುಳೆ ಹೋಗುತ್ತಿದ್ದು, ಸಾಮಾಜಿಕ, ಶೈಕ್ಷಣಿಕ ಹಾಗೂ ಆರೋಗ್ಯದ ದೃಷ್ಠಿಯಿಂದ ಅವರು ತೊಂದರೆ ಅನುಭವಿಸಬೇಕಾಗುತ್ತದೆ. ಆದ್ದರಿಂದ ಗ್ರಾಮಸ್ಥರು ಗುಳೆ ಹೋಗದೇ, ತಮ್ಮ ಊರಿನಲ್ಲಿಯೇ ಸ್ವ ಇಚ್ಛೆಯಿಂದ ಕೂಲಿ ಬೇಡಿಕೆ ಸಲ್ಲಿಸಿದಲ್ಲಿ ತುರ್ತಾಗಿ ಸಮುದಾಯಾಧಾರಿತ ಕಾಮಗಾರಿಗಳಾದ ನಮ್ಮ ಹೊಲ, ನಮ್ಮ ದಾರಿ, ವೈಯಕ್ತಿಕ ಕುರಿ, ದನದ ದೊಡ್ಡಿ, ತಮ್ಮ ಜಮೀನಿನಲ್ಲಿ ತೋಟಗಾರಿಕೆ ಕಾಮಗಾರಿಗಳನ್ನು ಕೈಗೊಳ್ಳಲು ಹಾಗೂ ತಮ್ಮ ಭೂಮಿಯ ಫಲವತ್ತತೆ, ಕೆರೆ ಕುಂಟೆ, ನೀರು ಸಂಗ್ರಹ ತೊಟ್ಟಿಗಳನ್ನು ನಿರ್ಮಿಸಿಕೊಳ್ಳಲು ಪ್ರತಿ ಕುಟುಂಬಕ್ಕೆ ಒಂದು ಆರ್ಥಿಕ ವರ್ಷದಲ್ಲಿ ೧೦೦ ದಿನ ಪೂರ್ತಿ ಕೆಲಸ ಕೊಡಲು ವ್ಯವಸ್ಥೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಗ್ರಾಮಸ್ಥರು ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಪಾಲ್ಗೊಂಡು ಆರ್ಥಿಕವಾಗಿ ಪ್ರಗತಿ ಕಾಣಬಹುದಾಗಿದೆ.
     ಜಿಲ್ಲೆಯ ಗ್ರಾಮೀಣ ಭಾಗದ ಕೂಲಿಕಾರರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಪ್ರತಿ ಕುಟುಂಬಕ್ಕೆ ೧೦೦ ದಿನಗಳ ಉದ್ಯೋಗವನ್ನು ನೀಡಲಾ
     ಜಿಲ್ಲೆಯ ಯಾವುದೇ ಭಾಗದಲ್ಲಿ ಗುಳೆ ಹೊರಟಿರುವುದು ಕಂಡುಬಂದಲ್ಲಿ ಜಿಲ್ಲಾ ಕಛೇರಿಯ ಸಹಾಯವಾಣಿ ಸಂಖ್ಯೆ : ೦೮೫೩೯-೨೨೦೧೭೪ ಗೆ ಬೆಳಿಗ್ಗೆ ೧೦ ರಿಂದ ಸಂಜೆ ೦೫.೩೦ ರವರೆಗೆ ಹಾಗೂ ಮೊಬೈಲ್ ಸಂಖ್ಯೆ: ೯೪೮೨೦೩೦೯೩೮ ಗೆ ಮಾಹಿತಿ ನೀಡಬಹುದಾಗಿದೆ. ಅಲ್ಲದೇ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಕೊಪ್ಪಳ, ದೂರವಾಣಿ : ೯೪೮೦೮೭೧೦೦೦ ಇವರಿಗೆ ಮೆಸೇಜ್ ಮೂಲಕ ತಮ್ಮ ಗ್ರಾಮದ ಕೆಲಸದ ಬಗ್ಗೆ ನಮೂದಿಸಿ ಕಳುಹಿಸಬಹುದಾಗಿದೆ ಎಂದು ಜಿ.ಪಂ. ಸಿಇಓ ಕೃಷ್ಣ ಉದಪುಡಿ ಅವರು ತಿಳಿಸಿದ್ದಾರೆ.

ಗುತ್ತಿದ್ದು, ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮಸ್ಥರಲ್ಲಿ ಗುಳೆ ಹೋಗದಂತೆ ನೈತಿಕ ಮನೋಸ್ಥೈರ್ಯ ತುಂಬಲು ಸ್ವ ಇಚ್ಛೆಯಿಂದ ಸಿದ್ಧರಾಗಬೇಕು. ಅಲ್ಲದೇ, ಅರ್ಜಿ ಸಲ್ಲಿಸಿದ ಎಲ್ಲಾ ಕೂಲಿಕಾರರಿಗೆ ತುರ್ತಾಗಿ ಕೆಲಸ ನೀಡಬೇಕು. ಗುಳೆಯಿಂದ ಧೃತಿಗೆಡದೇ ಪೂರ್ವಾಭಾವಿ ಸಿದ್ಧತೆಯನ್ನು ತಕ್ಷಣದಿಂದಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಈಗಾಗಲೆ ಸೂಚನೆ ನೀಡಿದ್ದಾರೆ. ಈ ಯೋಜನೆಯಡಿ ಸುಲಭವಾಗಿ ಎಲ್ಲರಿಗೂ ಕೆಲಸ ಸಿಗುವಂತೆ ಮಾಡಲು ಗ್ರಾಮೀಣ ಮಟ್ಟದಲ್ಲಿ ಆಂದೋಲನ ರೂಪದಲ್ಲಿ ಅನುಷ್ಠಾನಗೊಳಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಗ್ರಾಮಸ್ಥರು ತಮ್ಮ ವೈಯಕ್ತಿಕ ಶೌಚಾಲಯದ ಸುತ್ತ ತೆಂಗಿನ ಮರ, ನಿಂಬೆ ಗಿಡ ಇತರೆ ಗಿಡಗಳನ್ನು ನೆಟ್ಟು ಒಳ್ಳೆಯ ಪರಿಸರವನ್ನು ನಿರ್ಮಾಣ ಮಾಡುವಂತೆ ಕೋರಿದ್ದಾರೆ.

Advertisement

0 comments:

Post a Comment

 
Top