PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಆ.೧೪ (ಕ ವಾ): ಕೊಪ್ಪಳ ಜಿಲ್ಲಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಕಂದಾಯ ಇಲಾಖೆಯಲ್ಲಿನ ಗ್ರಾಮ ಲೆಕ್ಕಿಗರ ಹುದ್ದೆಗಳ ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು ತಿತಿತಿ.ಞoಠಿಠಿಚಿಟ.ಟಿiಛಿ.iಟಿ www.koppal.nic.in ನಲ್ಲಿ ಪ್ರಕಟಿಸಲಾಗಿದೆ.
     ಪರಿಶೀಲನಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ಆ.೨೪ ರಂದು ಜಿಲ್ಲಾಧಿಕಾರಿಗಳ ಕಛೇರಿ ಕೊಪ್ಪಳದಲ್ಲಿ ಏರ್ಪಡಿಸಲಾಗಿರುವ ದಾಖಲಾತಿ ಪರಿಶೀಲನೆಗೆ ಹಾಜರಾಗುವಂತೆ ಜಿಲ್ಲಾಧಿಕಾರಿಗಳ ಕಛೇರಿ ತಿಳಿಸಿದೆ. 
ಆ.೧೭ ರಂದು ಕುಕನೂರಿನಲ್ಲಿ ಕ್ಲಸ್ಟರ್ ಮಟ್ಟದ ಕ್ರೀಡಾಕೂಟ.
ಕೊಪ್ಪಳ, ಆ.೧೪ (ಕ ವಾ): ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕು ಕುಕನೂರಿನ ಜವಾಹರ ನವೋದಯ ವಿದ್ಯಾಲಯದ ವತಿಯಿಂದ ೨೬ ನೇ ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ ಸಮಾರಂಭ ಆ.೧೭ ಮತ್ತ ೧೮ ರಂದು ಕುಕನೂರಿನ ಚಾಂಪಿಯನ್ಸ್ ಸ್ಟೇಡಿಯಂನಲ್ಲಿ ನಡೆಯಲಿದೆ.
     ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಆ.೧೭ ರಂದು ಬೆಳಿಗ್ಗೆ ೮.೩೦ ಗಂಟೆಗೆ ನಡೆಯಲಿದ್ದು, ನವೋದಯ ವಿದ್ಯಾಲಯ ಕರ್ನಾಟಕ ಕ್ಲಸ್ಟರ್‌ನ ಅಸಿಸ್ಟಂಟ್ ಕಮಿಷನರ್ ಟಿ.ಗೋಪಾಲಕೃಷ್ಣ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕೊಪ್ಪಳದ ಉಪವಿಭಾಗಾಧಿಕಾರಿ ಪಿ.ಎಸ್.ಮಂಜುನಾಥ, ಕೊಪ್ಪಳ ಗವಿಸಿದ್ಧೇಶ್ವರ ಬಿ.ಎಡ್ ಕಾಲೇಜಿನ ಪ್ರಾಚಾರ್ಯ ಪ್ರಕಾಶ ಬಡಿಗೇರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
     ಕ್ರೀಡಾಕೂಟದ ಸಮಾರೋಪ ಸಮಾರಂಭ ಆ.೧೮ ರಂದು ಸಂಜೆ ೫ ಗಂಟೆಗೆ ಕುಕನೂರಿನ ಚಾಂಪಿಯನ್ಸ್ ಸ್ಟೇಡಿಯಂನಲ್ಲಿ ನಡೆಯಲಿದ್ದು, ಕುಕನೂರಿನ ಡಾ||ಜಿ.ಎಸ್.ಎಂ ರೂರಲ್ ಪಾಲಿಟೆಕ್ನಿಕ್‌ನ ಪ್ರಾಚಾರ್ಯ ಎನ್.ಆರ್.ಕುಕನೂರ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಯಲಬುರ್ಗಾದ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ನಾಗರಾಜ ಕಮ್ಮಾರ, ಕುಕನೂರಿನ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ವಿಶ್ವನಾಥ ಹಿರೇಗೌಡರ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
     ಬಾಗಲಕೋಟೆ, ಬಳ್ಳಾರಿ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಮತ್ತು ಕೊಪ್ಪಳ ಜಿಲ್ಲೆಯ ವಿದ್ಯಾಲಯಗಳು ಈ ೨೬ ನೇ ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಲಿವೆ ಎಂದು ಪ್ರಕಟಣೆ ತಿಳಿಸಿದೆ.
ಕೋಳೂರು ಬ್ಯಾರೇಜ್ ಕಂ ಬ್ರಿಜ್ ಆ. ೧೫ ರಂದು ಉದ್ಘಾಟನೆ
ಕೊಪ್ಪಳ ಆ. ೧೪ (ಕರ್ನಾಟಕ ವಾರ್ತೆ): ಜಲಸಂಪನ್ಮೂಲ (ಸಣ್ಣ ನೀರಾವರಿ) ಇಲಾಖೆ ವತಿಯಿಂದ ತಾಲೂಕಿನ ಕೋಳೂರು ಬಳಿ ೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಬ್ಯಾರೇಜ್ ಕಂ ಬ್ರಿಜ್ ಉದ್ಘಾಟನಾ ಸಮಾರಂಭ ಆ. ೧೫ ರಂದು ಮಧ್ಯಾಹ್ನ ೧-೩೦ ಗಂಟೆಗೆ ಕೋಳೂರು ಬಳಿ ನಡೆಯಲಿದೆ.
     ೫ ಕೋಟಿ ರೂ. ವೆಚ್ಚದಲ್ಲಿ ಹಿರೇಹಳ್ಳಕ್ಕೆ ಕೋಳೂರು ಬಳಿ ನಿರ್ಮಿಸಲಾಗಿರುವ ಈ ಬ್ಯಾರೇಜ್ ಕಂ ಬ್ರಿಜ್ ಮಂಗಳಾಪುರ ಹಾಗೂ ಕೋಳೂರು ಗ್ರಾಮಕ್ಕೆ ಸಂಪರ್ಕ ಸೇತುವೆಯೂ ಆಗಲಿದ್ದು, ಇಲ್ಲಿನ ಜನರ ಬಹು ದಿನಗಳ ಬೇಡಿಕೆ ಈಡೇರಿದಂತಾಗಿದೆ.  ಈ ಬ್ಯಾರೇಜ್ ಕಂ ಬ್ರಿಜ್ ನಿರ್ಮಾಣದಿಂದ ಈ ಭಾಗದ ಅಂತರ್ಜಲ ಅಭಿವೃದ್ಧಿಯಾಗಲಿದ್ದು, ಕೃಷಿಕರಿಗೂ ಸಹ ನೆರವಾಗಲಿದೆ.  ಬ್ಯಾರೇಜ್ ಕಂ ಬ್ರಿಜ್ ನ ಉದ್ಘಾಟನೆಯನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ನೆರವೇರಿಸುವರು.  ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಸಮಾರಂಭದ ಅಧ್ಯಕ್ಷತೆ ವಹಿಸುವರು.  ಜಿ.ಪಂ. ಅಧ್ಯಕ್ಷ ಅಮರೇಶ್ ಕುಳಗಿ, ಸಂಸದ ಸಂಗಣ್ಣ ಕರಡಿ, ಶಾಸಕರುಗಳಾದ ಬಸವರಾಜ ರಾಯರಡ್ಡಿ, ಇಕ್ಬಾಲ್ ಅನ್ಸಾರಿ, ದೊಡ್ಡನಗೌಡ ಪಾಟೀಲ್, ಹಾಲಪ್ಪ ಆಚಾರ್, ಅಮರನಾಥ ಪಾಟೀಲ್, ಶರಣಪ್ಪ ಮಟ್ಟೂರ, ಜಿ.ಪಂ. ಉಪಾಧ್ಯಕ್ಷ ವಿನಯಕುಮಾರ ಮೇಲಿನಮನಿ, ತಾ.ಪಂ. ಅಧ್ಯಕ್ಷೆ ಬಾನು ಚಾಂದಸಾಬ್, ಜಿ.ಪಂ. ಸದಸ್ಯರುಗಳಾದ ಭಾಗಿರಥಿ ಶಂಕರಗೌಡ ಪಾಟೀಲ್, ಕೋಳೂರು ಗ್ರಾ.ಪಂ. ಅಧ್ಯಕ್ಷೆ ಬಸಮ್ಮ ಪೂಜಾರ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

Advertisement

0 comments:

Post a Comment

 
Top