PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಆ. ೨೬ (ಕ ವಾ) ಕೊಪ್ಪಳ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಮಹಾತ್ಮಾ ಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯಡಿ ಈಗಾಗಲೆ ಕೂಲಿ ಆಧಾರಿತ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದ್ದು, ಗ್ರಾಮೀಣ ಪ್ರದೇಶದವರು ಸ್ಥಳೀಯವಾಗಿಯೇ ಲಭ್ಯವಾಗುವ ಕೂಲಿ ಕೆಲಸವನ್ನು ಪಡೆಯಬಹುದಾಗಿದ್ದು, ಗುಳೇ ಹೋಗದಂತೆ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಮನವಿ ಮಾಡಿಕೊಂಡರು.
     ಕೊಪ್ಪಳ ತಾಲೂಕು ಗೊಂಡಬಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಮುದ್ದಾಬಳ್ಳಿ ಗ್ರಾಮದಲ್ಲಿ ಉದ್ಯೋಗಖಾತ್ರಿ ಯೋಜನೆಯಡಿ ೮ ಲಕ್ಷ ರೂ. ವೆಚ್ಚದಲ್ಲಿ ಡೊಣ್ಣೆಗುಡ್ಡ ಬಳಿಯ ಚೆಕ್ ಡ್ಯಾಂ ಹೂಳೆತ್ತುವ
     ಈ ವರ್ಷ ಮಳೆಯ ಪ್ರಮಾಣ ಕಡಿಮೆ ಆಗಿರುವುದರಿಂದ, ಗ್ರಾಮ ಪಂಚಾಯತಿ ಕ್ರಿಯಾ ಯೋಜನೆಯಲ್ಲಿರುವ ಕಾಮಗಾರಿಗಳಲ್ಲಿ ಕೂಲಿ ಕೆಲಸ ನಿರ್ವಹಿಸಿ, ವೇತನ ಪಡೆಯಬಹುದಾಗಿದೆ.  ಕೂಲಿಕಾರರು ಸ್ಥಳೀಯವಾಗಿ ದೊರಕುವ ಕೆಲಸವನ್ನು ಪಡೆದುಕೊಂಡು, ಜೀವನ ನಿರ್ವಹಿಸಬಹುದಾಗಿದ್ದು, ಗುಳೇ ಹೋಗುವ ಅಗತ್ಯವಿಲ್ಲ.  ಸರ್ಕಾರ ಜಾರಿಗೆ ತಂದ ಉದ್ಯೋಗಖಾತ್ರಿ ಯೋಜನೆಯಡಿ ಪ್ರತಿ ಕುಟುಂಬಕ್ಕೆ ಪ್ರತಿ ವರ್ಷಕ್ಕೆ ೧೦೦ ಮಾನವ ದಿನಗಳಂತೆ ಉದ್ಯೋಗ ಪಡೆಯಲು ಅವಕಾಶ ಕಲ್ಪಿಸಲಾಗಿದೆ.  ಸಮುದಾಯ ಕಾಮಗಾರಿಗಳ ಜೊತೆಗೆ ವಯಕ್ತಿಕ ಕಾಮಗಾರಿಗಳಾದ ಕುರಿದೊಡ್ಡಿ/ದನದದೊಡ್ಡಿ, ಅರಣ್ಯೀಕರಣ, ತೋಟಗಾರಿಕೆ ಕಾಮಗಾರಿ ಅನುಷ್ಠಾನಕ್ಕೆ ಆಯಾ ಗ್ರಾಮ ಪಂಚಾಯತಿಗೆ ಉದ್ಯೋಗ ಕೋರಿ ಅರ್ಜಿ ಸಲ್ಲಿಸುವಂತೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಮನವಿ ಮಾಡಿದರು.  ಕೊಪ್ಪಳ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಕೃಷ್ನಮೂರ್ತಿ, ಗ್ರಾ.ಪಂ. ಅಧ್ಯಕ್ಷ ಶಂಕ್ರಪ್ಪ, ಪಿಡಿಓ ಲಕ್ಷ್ಮೀದೇವಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕೂಲಿಕಾರರೊಂದಿಗೆ ಸಮಾಲೋಚನೆ ನಡೆಸಿದರು.

Advertisement

0 comments:

Post a Comment

 
Top