PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಆ. ೧೨ಸಾಮಾಜಿಕ ಸಮಾನತೆಯ ಹರಿಕಾರ ದಿ: ಡಿ. ದೇವರಾಜ ಅರಸು ರವರ ಜನ್ಮ ಶತಮಾನೋತ್ಸವ ಆಚರಣೆಯನ್ನು ಆ. ೨೦ ರಂದು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪಿ.ಎಸ್. ಮಂಜುನಾಥ್ ಅವರು ಹೇಳಿದರು.  ಡಿ. ದೇವರಾಜ ಅರಸು ರವರ ಜನ್ಮ ಶತಮಾನೋತ್ಸವ ಆಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
     ಸಾಮಾಜಿಕ ನ್ಯಾಯ ಹಾಗೂ ಪರಿವರ್ತನೆಯ ಹರಿಕಾರ ಎನಿಸಿರುವ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಈ ಬಾರಿ ವಿಶೇಷವಾಗಿದ್ದು, ಅವರ ಜನ್ಮ ಶತಮಾನೋತ್ಸವವನ್ನು ಆ. ೨೦ ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು.  ಅಂದು ಬೆಳಿಗ್ಗೆ ೯ ಗಂಟೆಗೆ ಡಿ. ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆ ನಗರದ ಗವಿಮಠ ಆವರಣದಿಂದ ಪ್ರಾರಂಭಿಸಿ ಜವಾಹರ ರಸ್ತೆ ಮೂಲಕ ಸಾಹಿತ್ಯ ಭವನ ತಲುಪಲಿದೆ.  ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಪಾಲ್ಗೊಳ್ಳಲಿವೆ.  ಬೆಳಿಗ್ಗೆ ೧೧ ಗಂಟೆಗೆ ಸಾಹಿತ್ಯ ಭವನದಲ್ಲಿ ಸಮಾರಂಭ ಆಯೋಜಿಸಲಾಗುವುದು.  ಕಾರ್ಯಕ್ರಮದ ಅಂಗವಾಗಿ  ದೇವರಾಜ ಅರಸು ಕುರಿತಂತೆ ವಿಶೇಷ ಉಪನ್ಯಾಸ, ಎಸ್‌ಎಸ್‌ಎಲ್‌ಸಿ. ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಹಾ
     ದೇವರಾಜ ಅರಸು ಅವರ ಭಾವಚಿತ್ರ ಸಹಿತ ಮೆರವಣಿಗೆ ಸಾಗಿ ಬರುವ ರಸ್ತೆಯನ್ನು ಸ್ವಚ್ಛಗೊಳಿಸಬೇಕು.  ಅಲ್ಲದೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು ಎಂದು ಕೊಪ್ಪಳ ನಗರಸಭೆ ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ಸೂಚನೆ ನೀಡಲಾಯಿತು.
     ಸಭೆಯಲ್ಲಿ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಬಿ. ಕಲ್ಲೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಟಿ. ಕೊಟ್ರಪ್ಪ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಶಿಕಾಂತ್ ಕೋಟಿಮನಿ, ಆಹಾರ ಇಲಾಖೆ ಉಪನಿರ್ದೇಶಕ ವೈ.ಹೆಚ್. ಲಂಬು, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ. ಭಾಸ್ಕರ್ ನಾಯಕ್, ಡಿಡಿಪಿಐ ಎ. ಶ್ಯಾಮಸುಂದರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಗೂ ಕ್ರೀಡೆಗಳಲ್ಲಿ ಉತ್ತಮ ಸಾಧನೆಗೈದಿರುವ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಪ್ರತಿಭಾ ಪುರಸ್ಕಾರ ನೀಡಲಾಗುವುದು.  ಡಿ. ದೇವರಾಜ ಅರಸು ಅವರ ಕುರಿತು ವಾರ್ತಾ ಇಲಾಖೆ ತಯಾರಿಸಿರುವ ಸಾಕ್ಷ್ಯ ಚಿತ್ರದ ಪ್ರದರ್ಶನ ಇದೇ ಸಂದರ್ಭದಲ್ಲಿ ಏರ್ಪಡಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಪಿ.ಎಸ್. ಮಂಜುನಾಥ್ ಅವರು ಹೇಳಿದರು. 

Advertisement

0 comments:

Post a Comment

 
Top