ಕೊಪ್ಪಳ, ಆ.೨೨ (ಕ ವಾ) ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ವತಿಯಿಂದ ಸಂಸ್ಥೆಯಲ್ಲಿ ಚಾಲ್ತಿಯಲ್ಲಿರುವ ವಿವಿಧ ಯೋಜನೆಗಳ ಕುರಿತು ಉದ್ದಿಮೆದಾರರ ಸಭೆಯನ್ನು ಆ.೨೪ ರಂದು ಬೆಳಿಗ್ಗೆ ೧೧ ಗಂಟೆಗೆ ಹೊಸಪೇಟೆ ರಸ್ತೆಯಲ್ಲಿರುವ ಹೋಟೆಲ್ ಪಾರ್ಥ ಇಂಟರ್‌ನ್ಯಾಶನಲ್‌ನ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಸಣ್ಣ, ಅತೀ ಸಣ್ಣ ಹಾಗೂ ಮಧ್ಯಮ ಕೈಗಾರಿಕಾ ಉದ್ಯಮಗಳನ್ನು ಪ್ರೋತ್ಸಾಹಿಸಲು ಹಾಗೂ ಉದ್ಯೋಗಾವಕಾಶ ಕಲ್ಪಿಸಲು ಸಾಲ ಸೌಲಭ್ಯಗಳನ್ನು ನೀಡುತ್ತಾ ಬಂದಿರುವ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ವಿವಿಧ ಯೋಜನೆಗಳನ್ನು ಉದ್ದಿಮೆದಾರರಿಗೆ ತಲುಪಿಸುವ ಉದ್ದೇಶದಿಂದ ಈ ಸಭೆಯನ್ನು ಏರ್ಪಡಿಸಲಾಗಿದ್ದು, ಸಂಸ್ಥೆಯ ಪ್ರಧಾನ ಕಛೇರಿಯ ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಪ್ರಧಾನ ವ್ಯವಸ್ಥಾಪಕರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
Subscribe to:
Post Comments (Atom)
0 comments:
Post a Comment