ಕೊಪ್ಪಳ,
ಆ.೨೬ (ಕ ವಾ) ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಇಲಾಖೆ ಹಾಗೂ
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅಭ್ಯರ್ಥಿಗಳನ್ನು
ಆಯ್ಕೆ ಮಾಡಲು ಆ.೩೦ ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಏರ್ಪಡಿಸಲಾಗಿದ್ದು, ಈ
ಕುರಿತ ಪೂರ್ವಾಭಾವಿ ಸಭೆ ಆ.೨೭ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಜಿಲ್ಲಾಧಿಕಾರಿಗಳ
ಕಛೇರಿ ಸಭಾಂಗಣದಲ್ಲಿ ನಡೆಯಲಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ರಮಣದೀಪ್ ಚೌದರಿ ಅವರು ವಹಿಸುವರು. ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಸರ್ಕಾರದ ವೆಚ್ಚದಡಿ ನೀಡಲಾಗುವ ಐ.ಎ.ಎಸ್, ಕೆ.ಎ.ಎಸ್ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಆ.೩೦ ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ಯಾಮಸುಂದರ್ ತಿಳಿಸಿದ್ದಾರೆ.

0 comments:
Post a Comment