ಕೊಪ್ಪಳ ಆ. ೧೧ ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಮರಳಿ, ಶಾಲೆಗೆ ಕರೆ ತರುವಲ್ಲಿ ಶಿಕ್ಷಣ ಇಲಾಖೆ ಕ್ರಮ ತೃಪ್ತಿದಾಯಕವಾಗಿಲ್ಲ. ಗುಳೇ ಹೋಗಿರುವ ಕುಟುಂಬಗಳ ಮಕ್ಕಳ ಶಿಕ್ಷಣದ ಬಗ್ಗೆ ಆತಂಕವಿದ್ದು, ಒಟ್ಟಾರೆ ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಅಗತ್ಯ ವ್ಯವಸ್ಥೆ ರೂಪಿಸಬೇಕು ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷ ಅಮರೇಶ್ ಕುಳಗಿ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿಯ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಮಂಗಳವಾರದಂದು ಏರ್ಪಡಿಸಲಾಗಿದ್ದ ಜಿ.ಪಂ. ಕೆಡಿಪಿ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಕರೆ ತರುವಲ್ಲಿ ಶಿಕ್ಷಣ ಇಲಾಖೆ ಕ್ರಮ ತೃಪ್ತಿದಾಯಕವಾಗಿಲ್ಲ. ಜಿಲ್ಲೆಯಲ್ಲಿ ೦೧ ರಿಂದ ೦೫ ನೇ ತರಗತಿ ವರೆಗಿನ ಮಕ್ಕಳ ಪೈಕಿ ಒಟ್ಟು ೨೧೮ ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ ಈ ಪೈಕಿ ಕೇವಲ ೮೨ ವಿದ್ಯಾರ್ಥಿಗಳನ್ನು ಮರಳಿ ಶಾಲೆಗೆ ಕರೆತರಲಾಗಿದೆ. ಅದೇ ರೀತಿ ೬ ರಿಂದ ೦೭ ನೇ ತರಗತಿವರೆಗಿನ ೨೭೪ ಮಕ್ಕಳು ಶಾಲೆ ಬಿಟ್ಟಿದ್ದು, ಇವರಲ್ಲಿ ಕೇವಲ ೨೭ ವಿದ್ಯಾರ್ಥಿಗಳನ್ನು ಮಾತ್ರ ಮರಳಿ ಶಾಲೆಗೆ ಸೇರಿಸಲಾಗಿದೆ. ಶಾಲಾ ಆರಂಭಿಕ ಮಾಸದಲ್ಲಿಯೇ ಎಲ್ಲ ಮಕ್ಕಳನ್ನು ಶಾಲೆಗೆ ಕರೆತರುವಂತಾದಾಗ ಮಾತ್ರ, ಶೈಕ್ಷಣಿಕ ವರ್ಷದ ಪಾಠಗಳು ಮಕ್ಕಳಿಗೆ ಕಲಿಯಲು ಸಾಧ್ಯವಾಗಲಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸಲು ಶಿಕ್ಷಣ ಇಲಾಖೆ ಸೂಕ್ತ ಕಾರ್ಯಕ್ರಮ ರೂಪಿಸಿ, ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಜಿಲ್ಲೆಯಲ್ಲಿ ಗುಳೇ ಹೋಗುತ್ತಿರುವ ಪ್ರಕರಣಗಳು ವ್ಯಾಪಕವಾಗಿ ವರದಿಯಾಗುತ್ತಿದ್ದು, ಗುಳೇ ಹೋದ ಕುಟುಂಬದ ಮಕ್ಕಳ ಶಿಕ್ಷಣದ ಗತಿ ಏನು? ಎಂದು ಜಿ.ಪಂ. ಅಧ್ಯಕ್ಷರು ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ಯಾಮಸುಂದರ್ ಅವರು, ಗುಳೇ ಹೋದ ಕುಟುಂಬದ ಮಕ್ಕಳ ಬಗ್ಗೆ ಮಾಹಿತಿ ಪಡೆದು, ಅವರ ಮಕ್ಕಳ ಶಿಕ್ಷಣದ ಬಗ್ಗೆ ವರದಿ ಸಲ್ಲಿಸುವಂತೆ ಈಗಾಗಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಗುಳೇ ಹೋದ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದಲ್ಲಿಯೇ ಶೌಚಾಲಯದ ಮಹತ್ವ ಹಾಗು ಶೌಚಾಲಯ ಬಳಕೆ ಅಲ್ಲದೆ ಸ್ವಚ್ಛತೆಯ ಬಗ್ಗೆ ಪಠ್ಯೇತರ ಚಟುವಟಿಕೆ ಸಂದರ್ಭದಲ್ಲಿ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿ.ಪಂ. ಅಧ್ಯಕ್ಷ ಅಮರೇಳ್ ಕುಳಗಿ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪರ್ಯಾಯ ಬೆಳೆ ಮಾಹಿತಿ ನೀಡಿ: ಜಿಲ್ಲೆಯಲ್ಲಿ ಮುಂಗಾರು ಮಳೆ ವಿಫಲವಾಗಿದ್ದು, ಕೃಷಿ ಚಟುವಟಿಕೆ ಚುರುಕುಗೊಳ್ಳುವ ಮೇ ತಿಂಗಳಿನಿಂದ ಜುಲೈ ತಿಂಗಳಿನವರೆಗೆ ೨೦೫. ೫೦ ಮಿ.ಮೀ. ವಾಡಿಕೆ ಮಳೆಯ ಬದಲಿಗೆ ಕೇವಲ ೧೦೮. ೧೦ ಮಿ.ಮೀ. ಮಳೆಯಾಗಿದ್ದು ಶೇ. ೪೭ ರಷ್ಟು ಕೊರತೆ ಕಂಡುಬಂದಿದೆ. ಜುಲೈ ತಿಂಗಳು ಒಂದರಲ್ಲೇ ಶೇ. ೮೦ ರಷ್ಟು ಮಳೆಯ ಕೊರತೆಯಾಗಿದೆ. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ೨೫೨೫೦೦ ಹೆ. ಪ್ರದೇಶದಲ್ಲಿ ಬಿತ್ತನೆ ಗುರಿಯ ಬದಲಿಗೆ ೧೩೦೮೪೭ ಹೆ., ಅಂದರೆ ಶೇ. ೫೨ ರಷ್ಟು ಮಾತ್ರ ಬಿತ್ತನೆಯಾಗಿದೆ. ಇದರಲ್ಲಿ ೯೦೮೦೮ ಹೆ. ಮಳೆಯಾಶ್ರಿತ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಮಳೆಯ ಕೊರತೆಯಿಂದಾಗಿ ಬಿತ್ತನೆಯಾಗಿರುವ ಬೆಳೆಗಳೂ ಸಹ ಒಣಗುತ್ತಿವೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆ ಭರವಸೆ ಆಶಾದಾಯಕವಾಗಿಲ್ಲ. ರೈತರು ಧೃತಿಗೆಡದೆ, ಅಲ್ಪಾವಧಿ ಅಥವಾ ಪರ್ಯಾಯ ಬೆಳೆ ಬೆಳೆಯುವುದು ಸೂಕ್ತವಾಗಿದೆ. ಬೆಳೆ ನಷ್ಟದ ಕುರಿತು ಈಗಾಗಲೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಜಂಟಿಕೃಷಿ ನಿರ್ದೇಶಕ ರಾಮದಾಸ್ ಸಭೆಗೆ ವಿವರಿಸಿದರು. ಪರ್ಯಾಯ ಬೆಳೆಗಳ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು. ಹಾಗೂ ಇಂತಹ ಬೆಳೆಗಳ ಬಿತ್ತನೆ ಬೀಜ ಅಥವಾ ಗೊಬ್ಬರದ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಜಿ.ಪಂ. ಅಧ್ಯಕ್ಷರು ಸೂಚನೆ ನೀಡಿದರು.
ಗೋಶಾಲೆ ಸೂಕ್ತ : ಜಿಲ್ಲೆಯಲ್ಲಿನ ಮೇವಿನ ಪರಿಸ್ಥಿತಿ ಪರಿಶೀಲಿಸಿದ್ದು ಕೇವಲ ೬ ವಾರಗಳವರೆಗೆ ಆಗುವಷ್ಟು
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ಜಿ.ಪಂ. ಸದಸ್ಯ ಅರವಿಂದಗೌಡ ಪಾಟೀಲ್, ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಸೋಮಶೇಖರ ಹರ್ತಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು. ಕೆಡಿಪಿ ಪ್ರಗತಿ ಪರಿಶೀಲನಾ ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸುವಂತೆ ಜಿಲ್ಲಾ ಪಂಚಾಯತಿ ಅಧ್ಯಕ್ಷರು ಇದೇ ಸಂದರ್ಭದಲ್ಲಿ ಸೂಚನೆ ನೀಡಿದರು.
ಮೇವು ಮಾತ್ರ ಲಭ್ಯವಿರುವ ಸಾಧ್ಯತೆ ಇದೆ. ಜಿಲ್ಲೆಯ ೧೩ ಹೋಬಳಿಗಳಲ್ಲಿ ಮೇವಿನ ಸಮಸ್ಯೆ ತಲೆದೋರುವ ಸಂಭವವಿದೆ. ಮೇವು ಬ್ಯಾಂಕ್ ಸ್ಥಾಪನೆ, ಗೋಶಾಲೆ ತೆರೆಯುವುದು ಅಥವಾ ಮೇವು ಸಾಗಾಣಿಕೆಗೆ ವ್ಯವಸ್ಥೆ ಕಲ್ಪಿಸುವ ಕುರಿತಂತೆ ಮಾರ್ಗೋಪಾಯಗಳ ಬಗ್ಗೆ ಈಗಾಗಲೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಇಲಾಖೆಯಿಂದ ಮೇವು ಬೆಳೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ನೀರಾವರಿ ಪ್ರದೇಶದ ರೈತರಿಗೆ ಉಚಿತ ಮೇವು ಬೀಜದ ಮಿನಿ-ಕಿಟ್ ವಿತರಣೆಗೆ ಈಗಾಗಲೆ ಕ್ರಮ ಕೈಗೊಳ್ಳಲಾಗಿದೆ ಎಂದು ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ. ಭಾಸ್ಕರನಾಯಕ್ ಅವರು ತಿಳಿಸಿದರು. ಜಿಲ್ಲೆಯಲ್ಲಿ ಮೇವಿನ ಕೊರತೆ ಉಂಟಾದಲ್ಲಿ, ಜಾನುವಾರುಗಳ ರಕ್ಷಣೆಗೆ ಗೋಶಾಲೆ ತೆರೆಯುವುದು ಸೂಕ್ತ ಎಂದು ಜಿ.ಪಂ. ಅಧ್ಯಕ್ಷ ಅಮರೇಶ್ ಕುಳಗಿ ಅಭಿಪ್ರಾಯಪಟ್ಟರು.

0 comments:
Post a Comment