ಕೊಪ್ಪಳ- ಜಿಲ್ಲೆಯ ಸಂಗನಾಳ, ಹಲಗೇರಿ, ಹಿರೇಬನ್ನಿಗೋಳ ಮತ್ತು ಹಿರೇಸಿಂದೊಗಿ ಗ್ರಾಮದಲ್ಲಿ ಆಗಸ್ಟ್ ೧೧,೧೩,೧೪,೧೫ ರಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಜಿಲ್ಲಾ ಶಾಖೆ, ಕೊಪ್ಪಳದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಸಂಗನಾಳ - ಕುಷ್ಟಗಿ ತಾಲೂಕಿನ ಸಂಗನಾಳ ಗ್ರಾಮದಲ್ಲಿ ದಿ. ೧೧ ರಂದು ಮಂಗಳವಾರ ಗ್ರಾಮ ಪಂಚಾಯಿತಿ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಿದ್ದು ಗ್ರಾಮ ಪಂಚಾಯಿತಿಯಲ್ಲಿ ಅಂದು ಬೆಳಿಗ್ಗೆ ೧೦ ರಿಂದ ೦೪ ಗಂಟೆಯವರೆಗೆ ಜರುಗಲಿದೆ. ಹಲಗೇರಿ - ಕೊಪ್ಪಳ ತಾಲೂಕಿನ ಹಲಗೇರಿ ಗ್ರಾಮದಲ್ಲಿ ದಿ. ೧೩ ರಂದು ಗುರುವಾರ ಗ್ರಾಮ ಪಂಚಾಯಿತಿ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಿದ್ದು ಗ್ರಾಮ ಪಂಚಾಯಿತಿಯಲ್ಲಿ ಅಂದು ಬೆಳಿಗ್ಗೆ ೧೦ ರಿಂದ ೦೪ ಗಂಟೆಯವರೆಗೆ ಜರುಗಲಿದೆ. ಹಿರೇಬನ್ನಿಗೋಳ - ಕುಷ್ಟಗಿ ತಾಲೂಕಿನ ಹಿರೇಬನ್ನಿಗೋಳ ಗ್ರಾಮದಲ್ಲಿ ದಿ. ೧೪ ರಂದು ಶುಕ್ರವಾರ ಗ್ರಾಮ ಪಂಚಾಯಿತಿ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಿದ್ದು ಗ್ರಾಮ ಪಂಚಾಯಿತಿಯಲ್ಲಿ ಅಂದು ಬೆಳಿಗ್ಗೆ ೧೦ ರಿಂದ ೦೪ ಗಂಟೆಯವರೆಗೆ ಜರುಗಲಿದೆ. ಹಿರೇಸಿಂದೋಗಿ - ಕೊಪ್ಪಳ ತಾಲೂಕಿನ ಹಿರೇಸಿಂದೊಗಿ ಗ್ರಾಮದಲ್ಲಿ ದಿ. ೧೫ ರಂದು ಶನಿವಾರ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಿದ್ದು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಂದು ಬೆಳಿಗ್ಗೆ ೧೦ ರಿಂದ ೦೪ ಗಂಟೆಯವರೆಗೆ ಜರುಗಲಿದೆ. ಎಲ್ಲಾ ಶಿಬಿರಗಳಲ್ಲಿ ಆಸಕ್ತರು ರಕ್ತದಾನ ಮಾಡಿ ಸಹಕರಿಸುವಂತೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಡಾ. ಶ್ರೀನಿವಾಸ ಹ್ಯಾಟಿ ಕೋರಿದ್ದಾರೆ.
Subscribe to:
Post Comments (Atom)
0 comments:
Post a Comment