ಕೊಪ್ಪಳ, ಆ.೧೩ (ಕ,ವಾ): ಸ್ವಾತಂತ್ರ್ಯೋತ್ಸವದ ನಿಮಿತ್ಯ ಆ.೧೫ ರಂದು ನಡೆಯಲಿರುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಎಲ್ಲಾ ಸರ್ಕಾರಿ ಕಛೇರಿಗಳ ಮುಖ್ಯಸ್ಥರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸುವಂತೆ ಅಪರ ಜಿಲ್ಲಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ. ಸ್ವಾತಂತ್ರ್ಯೋತ್ಸವದ ಅಂಗವಾಗಿ ಅಂದು ಬೆಳಿಗ್ಗೆ ೦೮ ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಹಾಗೂ ಬೆಳಿಗ್ಗೆ ೦೯.೦೦ ಗಂಟೆಗೆ ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನೆರವೇರಿಸಲ್ಪಡುವ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮದಲ್ಲಿ ಎಲ್ಲಾ ಕಛೇರಿಗಳ ಮುಖ್ಯಸ್ಥರು, ಅಧಿಕಾರಿಗಳು ಹಾಗೂ ಸಿಬ್ಬಂದಿ ತಪ್ಪದೆ ಪಾಲ್ಗೊಳ್ಳಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
Subscribe to:
Post Comments (Atom)
0 comments:
Post a Comment