PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ, ಆ.೧೦ ಕೊಪ್ಪಳ ಜಿಲ್ಲಾ ಪಂಚಾಯತ್ ವ್ಯಾಪ್ತಿಯಡಿ ಸಂಜೀವಿನಿ ಎನ್.ಆರ್.ಎಲ್.ಎಂ ಯೋಜನೆಯ ರಾಜೀವ್‌ಗಾಂಧಿ ಚೈತನ್ಯ ಯೋಜನೆಯ ಅಭ್ಯರ್ಥಿಗಳ ಸಾಲ ಬಿಡುಗಡೆಗೆ ಶೀಘ್ರ ಕ್ರಮ ವಹಿಸಲಾಗುವುದು ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ತಿಳಿಸಿದ್ದಾರೆ.
     ಯೋಜನೆಯಡಿ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಲು ವೃತ್ತಿ ಕೌಶಲ್ಯ ತರಬೇತಿಯೊಂದಿಗೆ ಉದ್ಯೋಗ ಕಲ್ಪಿಸುವ ಮತ್ತು ಸ್ವಯಂ ಉದ್ಯೋಗ ಕೈಗೊಳ್ಳಲು ಅವಕಾಶವಿದೆ. ಕೊಪ್ಪಳ ಜಿಲ್ಲೆಯಲ್ಲಿ ಈಗಾಗಲೇ ೩೧೩೩ ಅಭ್ಯರ್ಥಿಗಳು ಸ್ವಯಂ ಉದ್ಯೋಗ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದು, ಈ ಪೈಕಿ ೧೪೮೫ ಅಭ್ಯರ್ಥಿಗಳಿಗೆ ಈಗಾಗಲೇ ವಿವಿಧ ಕ್ಷೇತ್ರಗಳಲ್ಲಿ ಉದ್ಯಮಶೀಲತಾ ತರಬೇತಿಯನ್ನು ನೀಡಲಾಗಿದೆ. ಬ್ಯಾಂಕ್‌ಗಳಿಂದ ಅವಶ್ಯಕತೆಗೆ ಅನುಗುಣವಾಗಿ ಸಾಲ ಮಂಜೂರಾತಿ ದೊರೆತಿದೆ. ಇಂತಹ ಅಭ್ಯರ್ಥಿಗಳಿಗೆ ಸರ್ಕಾರದ ವತಿಯಿಂದ ೧೦,೦೦೦ ರೂ.ಗಳ ಸಹಾಯಧನ ನೀಡಲಾಗುವುದು. ಸಹಾಯಧನದ ಅನುದಾನಕ್ಕಾಗಿ ಜಿಲ್ಲಾ ಪಂಚಾಯತ್ ವತಿಯಿಂದ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುದಾನ ಮಂಜೂರಾತಿ ಪ್ರಕ್ರಿಯೆಯಲ್ಲಿದೆ. ಸರ್ಕಾರದಿಂದ ಅನುದಾನ ಬಿಡುಗಡೆಯಾದ ಕೂಡಲೇ ಸಹಾಯಧನವನ್ನು ಸಂಬಧಿಸಿದ ಬ್ಯಾಂಕುಗಳಿಗೆ ಬಿಡುಗಡೆ ಮಾಡಿ ಅಭ್ಯರ್ಥಿಗಳ ಸಾಲ ಬಿಡುಗಡೆಗೆ ಕ್ರಮ ವಹಿಸಲಾಗುವುದು. ಆದ ಕಾರಣ ಅಭ್ಯರ್ಥಿಗಳು ಸಹಕರಿಸಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ.ಉದಪುಡಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.       

Advertisement

0 comments:

Post a Comment

 
Top