ಕೊಪ್ಪಳ, ಆ.೨೧ (ಕ ವಾ) ಸಮಾಜ ಕಲ್ಯಾಣ ಇಲಾಖೆ, ಉಪನಿರ್ದೇಶಕರ ಕಾರ್ಯಾಲಯ, ಕೊಪ್ಪಳ ಇವರ ವತಿಯಿಂದ ಪ್ರಸಕ್ತ ಸಾಲಿನ ಪರಿಶಿಷ್ಟ ವರ್ಗದ ೦೯, ೧೦ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮಂಜೂರು ಮಾಡಲು ಹೊಸದಾಗಿ ಆರಂಭಿಸಲಾಗಿರುವ ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್ ಎಂಬ ಯೋಜನೆಯಡಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪರಿಶಿಷ್ಟ ವರ್ಗದ ೦೯, ೧೦ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಇಲಾಖೆಯ ವೆಬ್‌ಸೈಟ್
www.scholarships.gov.in ಮೂಲಕ ಆನ್‌ಲೈನ್ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಆ.೩೧ ಕೊನೆ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕಿನ ತಾಲೂಕಾ ಸಮಾಜ ಕಲ್ಯಾಣ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಆಸಕ್ತ ಪರಿಶಿಷ್ಟ ವರ್ಗದ ೦೯, ೧೦ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಇಲಾಖೆಯ ವೆಬ್‌ಸೈಟ್
0 comments:
Post a Comment