ಕೊಪ್ಪಳ, ಸೆ.೦೭ (ಕ ವಾ) ಸರ್ಕಾರಿ ಪಾಲಿಟೆಕ್ನಿಕ್, ಕೊಪ್ಪಳ ಇವರ ವತಿಯಿಂದ ಸಮುದಾಯ ಅಭಿವೃದ್ಧಿ ಯೋಜನೆಯಡಿ ವಿವಿಧ ವೃತ್ತಿಗಳಲ್ಲಿ ಉಚಿತ ತರಬೇತಿ ನೀಡಲು ಕೊಪ್ಪಳ ನಗರದ ಆಸಕ್ತ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಯೋಜನೆಯಡಿ ಬೇಸಿಕ್ ಕಂಪ್ಯೂಟರ್, ಮೊಬೈಲ್ ಸರ್ವಿಸಿಂಗ್, ರಿಪೇರಿ ಆಫ್ ಎಲೆಕ್ಟ್ರಿಕಲ್ ಹೋಮ್ ಅಪ್ಲಾಯನ್ಸ್ (ವಿದ್ಯುತ್ ಉಪಕರಣಗಳ ದುರಸ್ತಿ), ಟೇಲರಿಂಗ್ ಹಾಗೂ ಫ್ಯಾಷನ್ ಡಿಸೈನಿಂಗ್ (ಮಹಿಳೆಯರಿಗೆ ಮಾತ್ರ) ಕೋರ್ಸುಗಳಿಗೆ ಕೊಪ್ಪಳ ನಗರದಲ್ಲಿ ತರಬೇತಿ ನೀಡಲಾಗುವುದು. ಅರ್ಜಿ ನಮೂನೆಗಳನ್ನು ಸೆ.೦೮ ರಿಂದ ವಿತರಿಸಲಾಗುತ್ತಿದ್ದು, ಸೆ.೧೫ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಕೊನೆ ದಿನಾಂಕವಾಗಿದೆ. ಅರ್ಜಿ ನಮೂನೆ ಹಾಗೂ ತರಬೇತಿ ಕುರಿತ ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್, ದದೇಗಲ್ ಹತ್ತಿರ, ಕೊಪ್ಪಳ ಅಥವಾ ಜಿಲ್ಲಾ ಕೈಗಾರಿಕಾ ಕೇಂದ್ರದ ಆವರಣದಲ್ಲಿರುವ ಖಾದಿ ಗ್ರಾಮೋದ್ಯೋಗ ಕಛೇರಿ ಬಳಿ ಇರುವ ಸಿ.ಡಿ.ಟಿ.ಪಿ ತರಬೇತಿ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ.
ತರಬೇತಿಯು ಸೆ.೧೫ ರಿಂದ ಆರಂಭಗೊಳ್ಳಲಿದ್ದು, ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ಅಂದು ಬೆಳಿಗ್ಗೆ ೧೧.೩೦ ಗಂಟೆಗೆ ಕೊಪ್ಪಳ ನಗರದ ಜಿಲ್ಲಾ ಕೈಗಾರಿಕಾ ಕೇಂದ್ರ, ನಗರಸಭೆ ಎದುರಿಗೆ, ಕೊಪ್ಪಳ ಇಲ್ಲಿ ಕಡ್ಡಾಯವಾಗಿ ಹಾಜರಾಗುವಂತೆ ಕೊಪ್ಪಳ ಸರ್ಕಾರಿ ಪಾಲಿಟೆಕ್ನಿಕ್‌ನ ಪ್ರಾಚಾರ್ಯರು ತಿಳಿಸಿದ್ದಾರೆ.
ಸಾಂತ್ವಾನ ಕೇಂದ್ರ ಆರಂಭಿಸಲು ಅರ್ಜಿ ಆಹ್ವಾನ
ಕೊಪ್ಪಳ, ಸೆ.೦೭ (ಕ ವಾ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೊಪ್ಪಳ ಹಾಗೂ ಕನಕಗಿರಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಮಹಿಳಾ ಸಹಾಯವಾಣಿ (ಸಾಂತ್ವಾನ) ಕೇಂದ್ರ ಆರಂಭಿಸಲು ಆಸಕ್ತ ಸ್ವಯಂ ಸೇವಾ ಸಂಸ್ಥೆಗಳಿಂದ ಪ್ರಸ್ತಾವನೆಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲಿಚ್ಛಿಸುವ ಸ್ವಯಂ ಸೇವಾ ಸಂಸ್ಥೆ ನೊಂದಣಿಯಾಗಿ ಕನಿಷ್ಠ ೩ ವರ್ಷಗಳಾಗಿರಬೇಕು. ಮಹಿಳಾ ಮತ್ತು ಮಕ್ಕಳ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರಬೇಕು. ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಿ, ಪರಿಹಾರ ನೀಡುವಲ್ಲಿ ಅನುಭವ ಹೊಂದಿರಬೇಕು. ಪ್ರತಿ ವರ್ಷ ನವೀಕರಣ ಹೊಂದಿರಬೇಕು. ಸಂಸ್ಥೆಯು ಸುಸಜ್ಜಿತ ಮೂಲ ಸೌಲಭ್ಯಗಳನ್ನು ಒಳಗೊಂಡ ಕಟ್ಟಡವನ್ನು ಹಾಗೂ ಸಿಬ್ಬಂದಿ ಹೊಂದಿರಬೇಕು ಅಥವಾ ಸ್ವಂತ ಕಟ್ಟಡವಿಲ್ಲದಿದ್ದಲ್ಲಿ ಬಾಡಿಗೆ ಕಟ್ಟಡ ವ್ಯವಸ್ಥೆ ಮಾಡುವಂತಿರಬೇಕು. ಪ್ರಸ್ತಾವನೆಯೊಂದಿಗೆ ಸಂಸ್ಥೆಯ ಕಳೆದ ೦೩ ವರ್ಷಗಳ ಲೆಕ್ಕಪತ್ರ, ದಾಖಲೆಗಳು, ವಾರ್ಷಿಕ ಪ್ರಗತಿ ವರದಿ, ಆರ್ಥಿಕವಾಗಿ ಸದೃಢವಾಗಿರುವ ಬಗ್ಗೆ ಬ್ಯಾಲೆನ್ಸ್‌ಶೀಟ್ ಮತ್ತು ಅಡೀಟ್ ವರದಿಗಳನ್ನು ಸಲ್ಲಿಸಬೇಕು. ಅಲ್ಲದೆ, ಸಂಸ್ಥೆಗೆ ಈಗಾಗಲೇ ಮಹಿಳಾ ಮತ್ತು ಮಕ್ಕಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿದ ಅನುಭವವಿದ್ದಲ್ಲಿ ಆ ದಾಖಲೆಗಳನ್ನು ಕೂಡಾ ಸಲ್ಲಿಸಬಹುದಾಗಿದೆ. ಸೆ.೧೯ ಪ್ರಸ್ತಾವನೆಗಳನ್ನು ಸಲ್ಲಿಸಲು ಕೊನೆ ದಿನಾಂಕವಾಗಿದ್ದು,
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ, ದೂರವಾಣಿ ಸಂಖ್ಯೆ: ೦೮೫೩೯-೨೨೨೭೦೩ ಇವರನ್ನು ಸಂಪರ್ಕಿಸಬಹುದಾಗಿದೆ.
ಶ್ರೀಕೃಷ್ಣ ಜಯಂತಿಯಲ್ಲಿ ಭಾಗವಹಿಸಲು ಸೂಚನೆ.
ಕೊಪ್ಪಳ, ಸೆ.೦೭ (ಕ ವಾ) ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಸೆ.೦೮ ರಂದು ಏರ್ಪಡಿಸಲಾಗಿರುವ ಶ್ರೀ ಕೃಷ್ಣ ಜಯಂತಿ ಕಾಯಕ್ರಮದಲ್ಲಿ ಎಲ್ಲಾ ಕಛೇರಿಯ ಮುಖ್ಯಸ್ಥರು ಹಾಗೂ ಸಿಬ್ಬಂದಿ ತಪ್ಪದೇ ಭಾಗವಹಿಸುವಂತೆ ಅಪರ ಜಿಲ್ಲಾಧಿಕಾರಿ ಡಾ|| ಪ್ರವೀಣಕುಮಾರ ತಿಳಿಸಿದ್ದಾರೆ.
ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ ೮.೩೦ ಗಂಟೆಗೆ ನಗರದ ಶ್ರೀ ಗೋಪಾಲಕೃಷ್ಣಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಆರಂಭಗೊಳ್ಳಲಿದ್ದು, ಗಡಿಯಾರ ಕಂಬ ವೃತ್ತ ಮಾರ್ಗವಾಗಿ ಜವಾಹರ ರಸ್ತೆ ಮೂಲಕ ಸಾಹಿತ್ಯ ಭವನ ತಲುಪಲಿದೆ. ಬಳಿಕ ಬೆಳಿಗ್ಗೆ ೧೧ ಗಂಟೆಗೆ ಸಾಹಿತ್ಯ ಭವನದಲ್ಲಿ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮ ಜರುಗಲಿದೆ. ಈ ಕಾರ್ಯಕ್ರಮಗಳಲ್ಲಿ ಎಲ್ಲಾ ಕಛೇರಿಯ ಮುಖ್ಯಸ್ಥರು ಮತ್ತು ಸಿಬ್ಬಂದಿ ತಪ್ಪದೇ ಉಪಸ್ಥಿತರಿರುವಂತೆ ಅಪರ ಜಿಲ್ಲಾಧಿಕಾರಿ ಡಾ|| ಪ್ರವೀಣಕುಮಾರ ತಿಳಿಸಿದ್ದಾರೆ.
ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಅರ್ಜಿ ಆಹ್ವಾನ.
ಕೊಪ್ಪಳ, ಸೆ.೦೭ (ಕ ವಾ)ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಇವರ ವತಿಯಿಂದ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಶ್ರೀ ವಾಲ್ಮೀಕಿ ಪ್ರಶಸ್ತಿಗಾಗಿ ಪರಿಶಿಷ್ಟ ವರ್ಗದ ಜನರಿಗೆ ಸೇವೆ ಸಲ್ಲಿಸಿದ ಜಿಲ್ಲೆಯ ಒಬ್ಬ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಾಗಿದ್ದು, ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯಮಟ್ಟದಲ್ಲಿ ಅಕ್ಟೋಬರ್.೨೭ ರಂದು ಜರುಗುವ ಮಹರ್ಷಿ ವಾಲ್ಮೀಕಿ ಜಯಂತಿಯಂದು ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಪ್ರಶಸ್ತಿಯು ಪ್ರಶಂಸಾ ಪತ್ರ, ಶಾಲು, ಗಂಧದಹಾರ, ಫಲಪುಷ್ಪ ಮತ್ತು ೨.೦೦ ಲಕ್ಷ ರೂ.ಗಳ ನಗದನ್ನು ಒಳಗೊಂಡಿದೆ. ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲಿಚ್ಛಿಸುವವರು ಕನಿಷ್ಠ ೩೫ ವರ್ಷಗಳ ವಯೋಮಿತಿ ಹೊಂದಿರಬೇಕು. ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರಬಾರದು. ಸಾಮಾಜಿಕ ಕ್ಷೇತ್ರದಲ್ಲಿ ಮುಖ್ಯವಾಗಿ ಪರಿಶಿಷ್ಟ ವರ್ಗದ ಜನರಿಗೆ ಸೇವೆ ಸಲ್ಲಿಸಿರಬೇಕು. ಜನಸಾಮಾನ್ಯರಲ್ಲಿ ಸ್ವಯಂ ಸೇವಕರಾಗಿ ಮಾನ್ಯತೆ, ಕೀರ್ತಿ ಪ್ರಖ್ಯಾತಿ ಹೊಂದಿರಬೇಕು. ಮಾಡಿರುವ ಸಾಧನೆಗಳ ಬಗ್ಗೆ ದಾಖಲೆಗಳನ್ನು ಹೊಂದಿರಬೇಕು. ಪರಿಶಿಷ್ಟ ವರ್ಗದವರನ್ನು ಶೈಕ್ಷಣಿಕವಾಗಿ ಪ್ರಗತಿಗೊಳಿಸಲು ಹಾಗೂ ಆರ್ಥಿಕವಾಗಿ ಸದೃಢಗೊಳಿಸಲು ಸ್ವಯಂ ಪ್ರೇರಣೆಯಿಂದ ದುಡಿಯುವ ವ್ಯಕ್ತಿಯಾಗಿರಬೇಕು. ಪರಿಶಿಷ್ಟ ಪಂಗಡಗಳ ಮೇಲೆ ನಡೆಯುವ ದೌರ್ಜನ್ಯಗಳ ನಿರ್ಮೂಲನೆ ಹಾಗೂ ಸಮಾಜದಲ್ಲಿ ಸಾಮರಸ್ಯ ವಾತಾವರಣ ನಿರ್ಮಾಣ ಮಾಡಲು ಅಥವಾ ದೌರ್ಜನ್ಯ ನಿಯಂತ್ರಿಸುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಶ್ರಮಿಸುವ ವ್ಯಕ್ತಿಯಾಗಿರಬೇಕು. ಮಹರ್ಷಿ ವಾಲ್ಮೀಕಿಗಳ ತತ್ವ, ಆದರ್ಶಗಳನ್ನು ಸಾಕಾರಗೊಳಿಸುವಂತಹ ಯಾವುದೇ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಪರಿಶಿಷ್ಟ ವರ್ಗದ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಶ್ರಮಿಸಿರುವ ವ್ಯಕ್ತಿಯಾಗಿರಬೇಕು.
ಪ್ರಶಸ್ತಿಗಾಗಿ ಜಿಲ್ಲೆಯಿಂದ ಒಬ್ಬರನ್ನು ಆಯ್ಕೆ ಮಾಡಬೇಕಾಗಿದ್ದು, ಮೇಲ್ಕಂಡ ಅರ್ಹತೆ ಹೊಂದಿದ ಹೆಚ್ಚಿನ ಅರ್ಜಿಗಳು ಬಂದಲ್ಲಿ ವಯಸ್ಸಿನ ಆಧಾರದ ಮೇಲೆ ಆಯ್ಕೆ ಮಾಡಿ ಕಳುಹಿಸಲಾಗುವುದು. ನಿಗದಿತ ಅರ್ಜಿ ನಮೂನೆಗಳನ್ನು ಉಪನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಅಥವಾ ತಾಲೂಕಾ ಸಮಾಜ ಕಲ್ಯಾಣ ಅಧಿಕಾರಿಗಳ ಕಛೇರಿಗಳಲ್ಲಿ ಪಡೆಯಬಹುದಾಗಿದ್ದು, ಅರ್ಜಿ ಸಲ್ಲಿಸಲು ಸೆ.೧೮ ಕೊನೆ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಬಿ.ಕಲ್ಲೇಶ, ಉಪರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ, ದೂರವಾಣಿ ಸಂಖ್ಯೆ: ೦೮೫೩೯-೨೨೦೧೩೮ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದೆ.

0 comments:
Post a Comment